9:29 PM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಎಂಆರ್‌ಪಿಎಲ್ ಸ್ಫೋಟದ ನಿಖರ ಕಾರಣ ಪತ್ತೆಹಚ್ಚಿ ಸಮಗ್ರ ತನಿಖೆ ನಡೆಸಿ: ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

30/09/2026, 21:22

*ತಕ್ಷಣ ಆರೋಗ್ಯ ಸುರಕ್ಷಾ ಸೌಲಭ್ಯ ಜಾರಿ ಮಾಡಿ, ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಿ: ಅಧಿಕಾರಿಗಳಿಗೆ ಒತ್ತಾಯ*

*ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚಿನ ಪರಿಹಾರ ಒದಗಿಸಬೇಕು*

ಮಂಗಳೂರು(reporterkarnataka.com): ಸ್ಫೋಟ ಸಂಭವಿಸಿದ ಮಂಗಳೂರಿನ ಎಂಆರ್‌ಪಿಎಲ್ ಸ್ಥಾವರಕ್ಕೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಂಆರ್ ಪಿಎಲ್ ಸ್ಥಾವರದಲ್ಲಿ ನಡೆದ ಸ್ಫೋಟ
ಸುರತ್ಕಲ್ ಮಾತ್ರವಲ್ಲ ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಭೂಕಂಪನದಂತಹ ಸ್ಪೋಟ ಸೃಷ್ಟಿಯಾಗಿದ್ದು ಎಚ್ಚರಿಕೆಯ ಸಂದೇಶವಾಗಿದೆ.
ಮೊದಲ ವರದಿಯಲ್ಲಿ 9 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿತ್ತು. ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ ಸಂದರ್ಭದಲ್ಲಿ ಸ್ಥಾವರದ ಬಳಿ ಕರ್ತವ್ಯ ನಿರತರಾಗಿದ್ದ ನೌಕರ ಮೃತಪಟ್ಟಿರುವುದು ಬಳಿಕ ತಡವಾಗಿ ತಿಳಿದು ಆಘಾತವಾಗಿದೆ ಎಂದು ಶಾಸಕರು ಹೇಳಿದರು.
ಇಂತಹ ದುರ್ಘಟನೆ ಮುಂದೆ ನಡೆಯಬಾರದು. ಸ್ಫೋಟದ ನಿಖರ ಕಾರಣ ಪತ್ತೆಹಚ್ಚಿ ಸಮಗ್ರ ತನಿಖೆ ನಡೆಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚಿನ ಪರಿಹಾರ ಒದಗಿಸಬೇಕು. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಕಂಪನಿಯೇ ಭರಿಸಿ, ಸೂಕ್ತ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.
ಇಂತಹ ಅಪಾಯಕಾರಿ ಸ್ಥಳದಲ್ಲಿ ಕೆಲಸ ಮಾಡುವ ನೌಕರವೃಂದಕ್ಕೆ ಸಂಸ್ಥೆಯು ಆರೋಗ್ಯ ಸುರಕ್ಷಾ ಸೌಲಭ್ಯವನ್ನು ತಾಕ್ಷಣ ಜಾರಿ ಮಾಡಬೇಕು ಎಂದು ಒತ್ತಾಯಿಸಿದರಲ್ಲದೆ,ಕಾರ್ಮಿಕರಿಗೆ ಸೂಕ್ತ ರಕ್ಷಣಾ ಸೌಲಭ್ಯ ಮತ್ತು ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು”
“ಸ್ಫೋಟದಿಂದ ಸುತ್ತಮುತ್ತಲಿನ ಮನೆ, ಕಟ್ಟಡಗಳಿಗೆ ಹಾನಿಯಾಗಿದ್ದಲ್ಲಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು. ಎಂದು ಅವರು ಹೇಳಿದರು.
ಬಳಿಕ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಮೃತ ನೌಕರರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು