9:34 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದು 2ನೇ ಹಂತದ ಮತದಾನ: ಶೆಟ್ಟರ್, ಬೊಮ್ಮಾಯಿ, ಗೀತಾ ಶಿವರಾಜ್ ಕುಮಾರ್ ಸೇರಿದಂತೆ 227 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ

07/05/2024, 09:08

ಬೆಂಗಳೂರು(reporterkarnataka.com): ರಾಜ್ಯದ 2ನೇ ಹಾಗೂ ದೇಶದ 3ನೇ ಹಂತದ ಲೋಕಸಭೆ ಚುನಾವಣೆಯ ಇಂದು (ಮೇ 7) ನಡೆಯಲಿದ್ದು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಇಬ್ಬರು ಕೇಂದ್ರ ಸಚಿವರು ಸೇರಿದಂತೆ
ಒಟ್ಟು 227 ಅಭ್ಯರ್ಥಿ ಗಳು ಕಣದಲ್ಲಿದ್ದಾರೆ. 2.59 ಕೋಟಿ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶವಿದೆ.

ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ತನಕ ರಾಜ್ಯದ 893 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ರಾಜ್ಯದ 2ನೇ ಹಂತದ ಮತದಾನ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರಾವಾಡ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಇಬ್ಬರು ಕೇಂದ್ರ ಸಚಿವರು ತಮ್ಮ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಬೆಳಗಾವಿ ಕ್ಷೇತ್ರದಿಂದ, ಇನ್ನೊರ್ವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇಬ್ಬರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಭಗವಂತ ಖೂಬಾ ಅವರು ಅನುಕ್ರಮವಾಗಿ ಧಾರಾವಾಡ ಹಾಗೂ ಬೀದರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಅಭ್ಯರ್ಥಿ ಯಾಗಿ ಸ್ಪರ್ಧಿ ಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು