1:48 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಇದೊಂದು ಅಭಿವೃದ್ಧಿ ಪರ ಬಜೆಟ್; ಉಡುಪಿ, ಬೆಳಗಾವಿಗೆ ಹೆಚ್ಚಿನ ಅನುದಾನ: ಸಿಎಂಗೆ ಅಭಿನಂದನೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

16/02/2024, 20:52

ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ‌.
2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
*ಸ್ಮಾರ್ಟ್‌ ಫೋನ್‌ಗಳಿಗೆ 90 ಕೋಟಿ*
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ 90 ಕೋಟಿ ರೂಪಾಯಿ ನೀಡಲಾಗಿದೆ. 90 ಕೋಟಿ ರೂ. ವೆಚ್ಚದಲ್ಲಿ 75,938 ಫೋನ್‌ಗಳನ್ನ ನೀಡಲಾಗುತ್ತಿದ್ದು, ಇದರಿಂದ ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳ್ಳಲಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.
ಒಟ್ಟಾರೆ ಇದೊಂದು ಅತ್ಯಂತ ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಎಂದು ಹೆಬ್ಬಾಳಕರ್ ಪ್ರಶಂಸಿಸಿದ್ದಾರೆ.
*ಉಡುಪಿ, ಬೆಳಗಾವಿಗೂ ಹೆಚ್ಚಿನ ಅನುದಾನ*
ನನ್ನ ತವರು ಜಿಲ್ಲೆ ಬೆಳಗಾವಿ ಹಾಗೂ ಉಸ್ತುವಾರಿ ಹೊತ್ತಿರುವ ಉಡುಪಿ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು