7:29 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್

26/06/2026, 16:10

ಮಂಗಳೂರು(reporterkarnataka.com):ಮಂಗಳೂರಿನಲ್ಲೇ ಇದ್ದಿದ್ದರೆ, ನಾನು ಇಲ್ಲಿನ ಅಲೋಶಿಯಸ್ ಶಿಕ್ಷಣ ಸಂಸ್ಥೆ, ಶಾರದಾ ಅಥವಾ ಅಮೃತಾನಂದಮಯಿ ಶಿಕ್ಷಣ ಸಂಸ್ಥೆಯಲ್ಲಿ ಕಲಿತು ಇಲ್ಲಿಯೇ ಶಿಕ್ಷಕನಾಗುತ್ತಿದ್ದೆ’ ಎಂದು ಗುರುವಾರ ಮಂಗಳೂರಿಗೆ ಆಗಮಿಸಿದ್ದ ವೇಳೆ ಬಾಲಿವುಡ್ ನಟ ಶಾರುಖ್‌ ಖಾನ್ ಹೇಳಿದ ಮಾತಿದು.
ರಿಯಲ್ ಎಸ್ಟೇಟ್ ಉದ್ಯಮದ ರೋಹನ್ ಕಾರ್ಪೊರೇಷನ್ ಸಂಸ್ಥೆಯು ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ‘ಆಯನ್ ಈನ್ನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ‘ನಮಸ್ಕಾರ ಕುಡ್ಡ, ಎಂಚ ಉಲ್ಲರ್’ ಎಂತಲೇ ಮಾತನ್ನು ಆರಂಭಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿರುವ ಶಾರುಖ್ ಖಾನ್, ‘ನನ್ನ ಅಜ್ಜ ಎನ್‌ಎಂಪಿಟಿಯಲ್ಲಿ ಎಂಜಿನಿಯ‌ರ್ ಆಗಿದ್ದರು. ಆ ವೇಳೆ ಅಂದರೆ, 1965-67ರವರೆಗೆ ನನ್ನ ಬಾಲ್ಯದ ದಿನಗಳನ್ನು ಕಳೆದಿದ್ದು ಪಣಂಬೂರಿನ ಕಡಲತೀರದಲ್ಲಿ. ಆಗ ಹಸುಳೆಯಾಗಿದ್ದ ನನಗೆ, ಆ ದಿನಗಳು ನೆನಪಿನಿಂದ ಮರೆಯಾಗಿದ್ದರೂ, ಹಿರಿಯರು ಹೇಳಿದ ಕಥೆಗಳು ಹಸುರಾಗಿವೆ’ ಎಂದಿದ್ದಾರೆ. ‌ಶಾರುಖ್ ಖಾನ್, ತಮ್ಮ ವೃತ್ತಿ ಜೀವನದಲ್ಲಿ 34 ವರ್ಷಗಳನ್ನು ಪೂರೈಸಿದ್ದಾರೆ. ಇದೇ ವೇಳೆ ಅವರು ‘ಚಮ್ಮಕ್ ಚಲ್ಲೋ ಮತ್ತು ಜೂಮ್ ಜೋ ಪಠಾಣ್‌ನಂತಹ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಿದ್ದಾರೆ. ತೆರೆ ಮೇಲೆ ಈ ಹಾಡುಗಳಲ್ಲಿ ಕಾಣಿಸಿಕೊಂಡಿದ್ದ ಶಾರುಖ್‌ ಅವರ ನೆನಪುಗಳನ್ನು ವೇದಿಕೆ ಮೇಲೆ ಮತ್ತೆ ನೆನಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು