8:56 PM Tuesday20 - May 2025
ಬ್ರೇಕಿಂಗ್ ನ್ಯೂಸ್
1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:… Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ… Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ… GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ… ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ… HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ… ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ…

ಇತ್ತೀಚಿನ ಸುದ್ದಿ

1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

20/05/2025, 20:49

*ಗ್ರೇಟರ್‌ ಬೆಂಗಳೂರು ಹೋಗಿ ವಾಟರ್‌ ಬೆಂಗಳೂರು ಆಗಿದೆ*


ಬೆಂಗಳೂರು(reporterkarnataka.com):
ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ತಿಳಿಸಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.
ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್‌ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು.
ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್‌ ಬೋರ್ಡ್‌ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್‌ ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿಗೆ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ದೂರಿದರು.


ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್‌ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏಪ್ರಿಲ್‌ 15ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್‌ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದರು.
ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್‌ ಬೆಂಗಳೂರು ಹೋಗಿ ವಾಟರ್‌ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ದೂರಿದರು.

ಇತ್ತೀಚಿನ ಸುದ್ದಿ

ಜಾಹೀರಾತು