2:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

*”2028ರಲ್ಲಿ ನೀವು ಗೆದ್ರೆ ನಿಮ್ಮ ಮನೆ ವಾಚ್‌ಮ್ಯಾನ್ ಆಗ್ತೀನಿ, ಸೋತ್ರೆ ನೀವು ಕುಮಾರಸ್ವಾಮಿ ಮನೆಯ ವಾಚ್‌ಮನ್ ಆಗ್ತೀರಾ ?*

27/06/2026, 17:19

ಬೆಂಗಳೂರು(reporterkarnataka.com):ಕೇಂದ್ರ ಸಚಿವರಾದ ಹೆಚ್‌ಡಿಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿರುದ್ಧ ಮಾತನಾಡುವ ನೀವು 2028ಕ್ಕೆ ಗೆದ್ದರೆ ನಾನು ನಿಮ್ಮ ಮನೆ ವಾಚ್‌ಮನ್ ಆಗುತ್ತೇನೆ, ನೀವು ಸೋತರೆ ಕುಮಾರಸ್ವಾಮಿ ಮನೆ ಮುಂದೆ ಸೆಕ್ಯೂರಿಟಿ ಆಗುತ್ತೀರಾ ಎಂದು ಎಂದು ಶಿಡ್ಲಘಟ್ಟ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಅವರು ಶಾಸಕ ಪ್ರದೀಪ್ ಈಶ್ವರ್‌ಗೆ ಬಹಿರಂಗ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರದೀಪ್ ಅವರೇ ನೀವು ಶಾಸಕರಾಗಿದ್ದು ಕೇವಲ ಕಾಂಗ್ರೆಸ್ ಮತಗಳಿಂದ ಅಲ್ಲ. ಜೆಡಿಎಸ್ ಮತಗಳಿಂದ ಎಂಬುದನ್ನು ಮರೆಯಬೇಡಿ, ಶಾಸಕರಾಗುವ ಮೊದಲು ನಿಮ್ಮ ಆಸ್ತಿ ಎಷ್ಟಿತ್ತು. ಈಗ ಎಷ್ಟು ಇದೆ ಎಂದು ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಅವರು ಕೋರ್ಟ್ ನೀಡಿದ ನೋಟಿಸ್ಸನ್ನಷ್ಟೇ ಜೆಡಿಎಸ್ ಪಕ್ಷದ ಪೇಜಿನಲ್ಲಿ ಪೋಸ್ಟ್ ಮಾಡಿದ್ದಾರೆ ಹೊರತು ಅವರು ಎಲ್ಲಿಯೂ ಪ್ರದೀಪ್ ಈಶ್ವರ್ ಹೆಸರು ಉಲ್ಲೇಖ ಮಾಡಿಲ್ಲ. ಆದರೆ ಪ್ರದೀಪ್ ಈಶ್ವರ್ ಕುಮಾರಸ್ವಾಮಿ, ದೇವೇಗೌಡರ ಕುಟುಂಬದ ವಿರುದ್ಧ ಮನಸ್ಸಿಗೆ ಬಂದಂತೆ ಮಾತನಾಡಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು