4:44 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಐಗಳ ಮಲ್ಲಾಪುರ; ಸಮರ್ಪಕವಾಗಿ ನೀರು ಪೂರೈಸದಿದ್ದಲ್ಲಿ ಗ್ರಾಪಂ ಗೆ ಬೀಗ: ಎಐಕೆಎಸ್ ಎಚ್ಚರಿಕೆ

14/06/2022, 19:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು, ಚೌಡಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. 

ಸಂಬಂಧಿಸಿದಂತೆ ಕೆಲ ಗ್ರಾಮಸ್ಥರು ಚೌಡಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಹಕ್ಕೋತ್ತಾಯ ಪತ್ರ ನೀಡಿದ್ದು, ಅಭಿವೃದ್ಧಿ ಅಧಿಕಾರಿ ಅನಿಪಸ್ಥಿತಿಯಲ್ಲಿ ಬಿಲ್ ಕಲೆಕ್ಟರ್ ಕಮ್ಮಾರ ನಾಗರಾಜ ರವರಿಗೆ ನೀಡಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿ ನೀರನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ, ನೀರಗಂಟಿ ತನ್ನ ಕರ್ಥವ್ಯ ಸರಿಯಾಗಿ ನಿರ್ವಹಿಸುತ್ತಿಲ್ಲ, ನೀರಿನ ತೊಟ್ಟಿಯ ಸುತ್ತ ಮುತ್ತ ದಪ್ಪ ಪಾಚಿ ಬೆಳೆದು ಹಿರಿಯರು ಮಹಿಳೆಯರು, ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ. ಮತ್ತು ಗ್ರಾಮದ ಬಹುತೇಕ ನಳಗಳಿಗೆ ಟ್ಯಾಪ್ ಹಾಕಿಸಿಲ್ಲ, ನೀರಿನ ಟ್ಯಾಂಕ್ ಮತ್ತು ನೀರಿನ ತೊಟ್ಟಿ ಸ್ವಚ್ಚಗೊಳಿಸಿಲ್ಲ, ಪರಿಣಾಮ ಬಹುತೇಕ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳಿಂದ ನರಳುಂವತಾಗಿದೆ. ಕಾರಣ ಮೊದಲು ನೀರಿನ ಟ್ಯಾಂಕ್ ಸ್ವಚ್ಚಗೊಳಿಸಿಬೇಕು,  ನೀರಿನ ತೊಟ್ಟಿ ಸ್ವಚ್ಚಗೊಳಿಸಿ ಸುತ್ತಲೂ ಸ್ವಚ್ಚಗೊಳಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೀಘ್ರವೇ ಕ್ರಮ ಜರುಗಿಸಬೇಕು, ನಿರ್ಲಕ್ಷ್ಯ ತೋರಿದ್ದಲ್ಲಿ ಗ್ರಾಪಂ ಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ. ಅಖಿಲ ಭಾರತ ಕಿಸಾನ್ ಸಭಾ ಮುಖಂಡ ಕೆ.ಓಬಳೇಶ, ಉಳ್ಳಂಗಿ ಕುಬೇರ, ಹೊನ್ನೂರಪ್ಪ,ಬೊಮ್ಮಣ್ಣ, ಕೆ.ಪಾಪನಾಯಕ, ಡಿ.ಪಾಪನಾಯಕ, ಜಗಳೂರಪ್ಪ, ಪಂಚಾರ ಶಾಪ್ ಓಬಳೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು