10:05 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇಲಕಲ್: ಜು. 30ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಬಾಗಲಕೋಟೆ ಜಿಲ್ಲಾ ಘಟಕ ಉದ್ಘಾಟನೆ

29/07/2023, 12:32

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ

info.reporterkarnataka@gmail.com

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಇಲಕಲ್ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬಾಗಲಕೋಟೆ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನ್ ರಾವ್ ಭವನದಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆಯನ್ನು ಡಾ. ಸೀತೆಮ್ ವಜ್ಜಲ್ (ಜಿಲ್ಲಾಧ್ಯಕ್ಷರು ಹಾಗೂ ಬಸವಕ್ರಾಂತಿ ಸಂಪಾದಕ ಸಿದ್ದನಗೌಡ ಪಾಟೀಲ್) ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಸ್ತಾವಿಕ ಮಾತನಾಡಲಿದ್ದಾರೆ.
ಇಲಕಲ್ಲಿನ ಪೂಜ್ಯರು ಶ್ರೀಮಾ. ನಿ. ಪ್ರ. ಗುರು ಮಹಾಂತ ಸ್ವಾಮಿಗಳು (ಚಿತ್ತರಗಿ ಸಂಸ್ಥಾನ ಇಲ್ಕಲ್),ಸಾನಿಧ್ಯ ಪೂಜ್ಯಶ್ರೀ ಜ್ಞಾನಪೀಠ ಸ್ವಾಮಿಗಳು (ಉರಿಲಿಂಗ ಪೆದ್ದಿ ಮಠ ಮೈಸೂರು) ಉಪಸ್ಥಿತರಿರುವರು. ಶಾಸಕ ಹುನಗುಂದ ವಿಜಯಾನಂದ ಎಸ್. ಕಾಶಪ್ಪನವರ್ ಜ್ಯೋತಿ ಬೆಳಗಿಸಲಿರುವರು. ಮಾಜಿ ಶಾಸಕ
ದೊಡ್ಡನಗೌಡ ಬಿ ಪಾಟೀಲ್ , ಎಸ್ ಆರ್ ನವಲಿ ಹಿರೇಮಠ ಭಾಗವಹಿಸಲಿರುವರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ದ್ವನಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸಾಕ್ ಪ್ರಸ್ತಾವನೆ ಮಾಡಲಿದ್ದಾರೆ. ರಾಜ್ಯದ ಎಲ್ಲ ತಾಲೂಕು, ಜಿಲ್ಲಾ ಘಟಕದಿಂದ ಸುಮಾರು 2000ಕ್ಕೂ ಹೆಚ್ಚು ಪತ್ರಕರ್ತರ ಭಾಗವಹಿಸುವಲಿದ್ದಾರೆ ಎಂದು ಮಸ್ಕಿ ತಾಲೂಕು ಕರ್ನಾಟಕ ಕಾರ್ಯ ನಿರ್ವಹ ಪತ್ರಕರ್ತರ ಧ್ವನಿ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು