ಇತ್ತೀಚಿನ ಸುದ್ದಿ
ಅಕ್ರಮ ಬಾಂಗ್ಲಾ ವಲಸಿಗರು: ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ
07/01/2026, 12:08
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಇತ್ತೀಚಿನ ದಿನಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲ್ ಎಸ್ಟೇಟ್‌ಗೆ ಪಿಎಸ್ಐ ಹರ್ಷವರ್ಧನ್ ಅವರು ಸಿಬ್ಬಂದಿಗಳೊಂದಿಗೆ ಭೇಟಿ ನೀಡಿದರು.
ಈ ವೇಳೆ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ಎಂ-ಆಧಾರ್ ಆಪ್ ಮೂಲಕ ಪರಿಶೀಲನೆ ನಡೆಸಿದರು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಕ್ರಮ ವಲಸಿಗರ ಪತ್ತೆಗಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.












