11:13 PM Wednesday7 - May 2025
ಬ್ರೇಕಿಂಗ್ ನ್ಯೂಸ್
Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:…

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ: ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರೂ.ಗಳ ಕಿರೀಟ ಸಮರ್ಪಿಸಿದ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

06/05/2025, 21:30

ಹೈದರಾಬಾದ್(reporterkarnataka.com): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ
884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
13 ವರ್ಷಗಳ ದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಜನಾರ್ದನ ರೆಡ್ಡಿ ಮೇಲಿನ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ.
ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆ ಹಾಗೂ ಹಾಲಿ ಶಾಸಕ ಎಂಬುದನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ನ್ಯಾಯಾಲಯಕ್ಕೆ
ಮನವಿ ಮಾಡಿದ್ದರು. ಆದರೆ, ಸಿಬಿಐ ವಿಶೇಷ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ. ಜನಾರ್ದನ ರೆಡ್ಡಿ ಎಸಗಿರುವ ಅಪರಾಧವು ಜೀವಾವಧಿ ಶಿಕ್ಷೆಗೆ ಯೋಗ್ಯವಾದದ್ದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರಿಂದ ಜನಾರ್ದನ ರೆಡ್ಡಿ ಮತ್ತೆ ಜೈಲು ಸೇರಬೇಕಾಗುತ್ತದೆ.
ಜನಾರ್ದನ ರೆಡ್ಡಿಯವರು ತಿರುಪತಿ ತಿಮ್ಮಪ್ಪನಿಗೆ 45
ಕೋಟಿ ರೂ.ಗಳ ವಜ್ರದ ಕಿರೀಟ ಅರ್ಪಿಸಿರುವುದನ್ನು ಸ್ಮರಿಸಬಹುದು. ಅಪರಾಧ ಎಸಗಿ ಯಾವುದೇ ದೇವರಿಗೆ ಮೊರೆ ಹೋದರೂ ಪ್ರಯೋಜನವಿಲ್ಲ, ಮಾಡಿದ ಕರ್ಮವನ್ನು ಅನುಭವಿಸಲೇ ಬೇಕೆನ್ನುವುದು ತೀರ್ಪಿನಿಂದ ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು