7:30 PM Saturday22 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.…

ಇತ್ತೀಚಿನ ಸುದ್ದಿ

ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ

22/11/2025, 19:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳದ ಮಿಂಚಿನ ಪದವು ಎಂಬಲ್ಲಿಂದ ಸುಮಾರು 400 ಕೆಂಪು ಕಲ್ಲುಗಳನ್ನು ಲಾರಿ ಯಲ್ಲಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಅರೆತ ಪೊಲೀಸರು ಕಲ್ಲುಗುಂಡಿ ಹೊರ ಠಾಣೆಯ ಬಳಿ ಪೊಲೀಸರು ವಾಹನ ತಡೆದು ತಪಾಸಣೆ ನಡೆಸಿದ ವೇಳೆ ಪರವಾನಗಿ ಇಲ್ಲದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಕಲ್ಲುಗುಂಡಿ ಠಾಣಾ ಸಿಬ್ಬಂದಿ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಠಾಣೆಯ ಪಿ ಎಸ್ ಐ ಸರಸ್ವತಿ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿ ಲಾರಿ ಚಾಲಕ ಸೈಯದ್ ಮಾತ್ತು ವಾಹನ ಮಾಲೀಕ ಶೇಷಪ್ಪ ಪೂಜಾರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಲಾರಿ ಯನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು