8:09 PM Friday8 - May 2026
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು

ಇತ್ತೀಚಿನ ಸುದ್ದಿ

ಅಕ್ರಮ ಅಕ್ಕಿ ವ್ಯಾಪಾರ; 3 ಲಕ್ಷ ರೂ. ಹಣ ವಸೂಲಿ: ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಬಂಧನ

08/05/2026, 19:54

ಗಣೇಶ್ ಇನಾಂದಾರ್ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ವ್ಯಾಪಾರ ನಿಯಂತ್ರಿಸಲು ಜಿಲ್ಲೆಯಲ್ಲಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ.
ಇದರಲ್ಲಿ ಎಸ್‌ಪಿ ಸ್ಕ್ವಾಡ್ ಎಂದು ಸ್ವತಃ ಎಸ್ಪಿ ಗನ್ ಮ್ಯಾನ್ ಅಕ್ರಮ ಪಡಿತರ ಅಕ್ಕಿ ವ್ಯಾಪಾರದಲ್ಲಿ ಹಣ ವಸೂಲಿ ಮಾಡಲಾಗಿರುವುದು ಕಂಡುಬಂದಿದ್ದು ಗನ್ ಮ್ಯಾನ್ ದೇವರಾಜ್ ಹಾಗೂ ಆತನ ಸಹಚರನ ಬಂಧಿಸಲಾಗಿದೆ ಎಂದು ಶುಕ್ರವಾರ ಬಳ್ಳಾರಿ ಎಸ್ಪಿ ಸುಮನ್ ಪನ್ನೇಕರ್ ಅವರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

*ಶರಭಯ್ಯ ಎನ್ನುವ ಪಡಿತರ ಅಕ್ಕಿ ಸಾಗಾಣೆದಾರನಿಂದ 3 ಲಕ್ಷ ವಸೂಲಿ:* ಶರಭಯ್ಯ ಎಂಬುವವರಿಂದ ಮೋಕಾ ಪೋಲಿಸ್ ಠಾಣೆಯಲ್ಲಿ ನೀಡಿದ್ದ ದೂರಿನ ಹಿನ್ನೆಲೆ ಕ್ರಮಕೈಗೊಂಡಿದ್ದು, ಪಡಿತರ ಅಕ್ಕಿ ತುಂಬಿಕೊಂಡು ಆಂಧ್ರಪ್ರದೇಶಕ್ಕೆ ಹೊರಟಿದ್ದ ಎರಡು ಲಾರಿಗಳು ಆ ಲಾರಿಗಳನ್ನ ಅಡ್ಡಗಟ್ಟಿ ಎಸ್ಪಿ ಸ್ಕ್ವಾಡ್ ಅಂತ ಹೇಳಿ.
5 ಲಕ್ಷ ಕೇಳಿ, 3 ಲಕ್ಷ ವಸೂಲಿ ಮಾಡಿದ್ದ ಗನ್ ಮ್ಯಾನ್ ದೇವರಾಜ್ ಹಣ ನೀಡದಿದ್ದರೆ ಸೀಜ್ ಮಾಡಿ ಜೈಲಿಗೆ ಕಳಿಸುವುದಾಗಿ ಜೀವ ಬೆದರಿಕೆ ಹಾಕಿದ ಹಿನ್ನೆಲೆ ಶರಭಯ್ಯ ಅವರು ನೀಡಿದ ದೂರಿನ ಹಿನ್ನೆಲ್ಲೇಯಲ್ಲಿ ದೇವರಾಜ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಿಸಿ,ಗನ್ ಮ್ಯಾನ್ ದೇವರಾಜ್ ಎಸ್ಪಿ ಸ್ಕ್ವಾಡ್ ಅಂತ ಹಣ ವಸೂಲಿ ಮಾಡಿರುವುದು ಖಚಿತವಾದ ಹಿನ್ನಲೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಅಕ್ಕಿ ದಂಧೆಯ ಜಿಲ್ಲಾ ಪೋಲಿಸ್ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು ನೂರಾರು ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.

*ಹೆಲ್ಮೆಟ್ ಜಾಗೃತಿ ಅಭಿಯಾನ:* ಅಭಿಯಾನ ರಸ್ತೆ ಅಪಘಾತಗಳಲ್ಲಿ ಹೆಚ್ಚುತ್ತಿರುವ ಸಾವು-ನೋವುಗಳನ್ನು ತಡೆಗಟ್ಟುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ಜೂನ್ 1ರಿಂದ ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು
ತಿಳಿಸಿದರು.

ಕಳೆದ ನಾಲ್ಕು ವರ್ಷಗಳ ಅಪಘಾತಗಳ ಪರಿಶೀಲನೆಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದ್ದರಿಂದ 426 ಮಂದಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಪಘಾತಗಳಿಂದ ಕುಟುಂಬಗಳು ಹಾಗೂ ಸಾರ್ವಜನಿಕರಿಗೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದರು.
ಹೆಲ್ಮೆಟ್ ಧರಿಸುವುದರಿಂದ ಅನಾಹುತಗಳನ್ನು ತಪ್ಪಿಸಬಹುದಾಗಿದ್ದು,ಶಾಲೆ ಹಾಗೂ ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳಿಗೆ ಈ ಕುರಿತು ಮಾಹಿತಿ ನೀಡಲಾಗುವುದು. ಮೈನರ್
ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಪ್ರಾಪ್ತರು ವಾಹನ ಚಲಾಯಿಸಿದರೆ 25 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.ಹೆಲ್ಮೆಟ್ ವಿಚಾರದಲ್ಲಿ ಯಾವುದೇ ರಾಜಿ
ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ದ್ವಿಚಕ್ರ ವಾಹನ ಸವಾರರ ಪ್ರಾಣ ರಕ್ಷಣೆಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು