5:04 AM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಅಕ್ರಮವಾಗಿ ಇ-ಸಿಗರೇಟು, ಹುಕ್ಕಾ ಸಾಧನಗಳ ಮಾರಾಟ; 9.72 ಲಕ್ಷ ಮೌಲ್ಯದ ಸೊತ್ತು ವಶ; 3 ಮಂದಿ ವಿರುದ್ಧ ಪ್ರಕರಣ ದಾಖಲು

07/10/2025, 20:12

ಮಂಗಳೂರು(reporterkarnataka.com): ನಗರದ ಲಾಲ್ ಬಾಗ್ ನ ಕಾಂಪ್ಲೆಕ್ಸ್ ವೊಂದರ ಅಂಗಡಿಯಲ್ಲಿ ಅಕ್ರಮವಾಗಿ ಇ-ಸಿಗರೇಟು ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧಿಸಿದಂತೆ ಅಂಗಡಿಯ ಮಾಲಕ ಸೇರಿದಂತೆ 3 ಮಂದಿ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲಾಲ್ ಬಾಗ್ ನ ಸಾಯಿಬೀನ್ ಕಾಂಪ್ಲೇಕ್ಸ್ ನ ಆಮಂತ್ರಣ ಎಂಬ ಹೆಸರಿನ ಅಂಗಡಿಯಲ್ಲಿ ನಿಷೇಧಿತವಾಗಿರುವ ಇ-ಸಿಗರೇಟ್ ಗಳನ್ನು ಅಕ್ರಮವಾಗಿ ಸ್ವದೇಶಿ ಮತ್ತು ವಿದೇಶಿಯ ಸಿಗರೇಟ್ ಗಳನ್ನು ಹಾಗೂ ಹುಕ್ಕಾ ಸೇವನೆ ಮಾಡಲು ಬಳಸುವ ಸಾಧನಗಳನ್ನು ಅಕ್ರಮವಾಗಿ ಇಟ್ಟುಕೊಂಡು ಸಾರ್ವಜನಿಕರಿಗೆ, ಯುವಕರ-ಯುವತಿಯರಿಗೆ ಸರಬರಾಜು ಹಾಗೂ ಮಾರಾಟ ಮಾಡುತ್ತಿದ್ದಾರೆಂದು ಖಚಿತವಾದ ಮಾಹಿತಿ ಮೇರೆಗೆ ಬರ್ಕೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮೋಹನ್ ಕೊಟ್ಟಾರಿ ಅವರು ಠಾಣಾ ಪಿಎಸ್ ಐ ಮತ್ತು ಸಿಬ್ಬಂದಿಗಳೊಂದಿಗೆದಾಳಿ ನಡೆಸಿದ್ದಾರೆ.
ಆಮಂತ್ರಣ ಹೆಸರಿನ ಶಾಪ್ ನಲ್ಲಿ ಒಟ್ಟು 847 (ಅಂದಾಜು ಮೌಲ್ಯ 4,43,125/-) ವಿವಿಧ ಕಂಪನಿಗಳ ಇ-ಸಿಗರೇಟ್ ಗಳನ್ನು, ಸಿಗರೇಟ್ ನ ಪ್ಯಾಕ್ ನ ಮೇಲೆ 85% ಪ್ರತಿಶತ ಅದರ ಸೇವನೆಯಿಂದ ಆಗುವ ದುಷ್ಪರಿಣಾಮದ ಚಿತ್ರವನ್ನು ಪ್ರದರ್ಶಿಸದೇ ಇರುವ ವಿವಿಧ ಕಂಪನಿಗಳ ಸ್ವದೇಶಿ ಮತ್ತು ವಿದೇಶಿಯ ಒಟ್ಟು 10 Pack (412 Box) ಮತ್ತು 86 Pack ಸಿಗರೇಟ್ ಗಳು (ಅಂದಾಜು ಮೌಲ್ಯ 5,09120/-)* ಮತ್ತು ಹುಕ್ಕಾ ಸೇವನೆ ಮಾಡುವ ಬಳಸುವ ವಿವಿಧ ಆಕೃತಿಗಳ 25 (ಅಂದಾಜು ಮೌಲ್ಯ ರೂ.20,500/-)* ಸಾಧನಗಳನ್ನು ಒಟ್ಟು ಅಂದಾಜು ಮೌಲ್ಯ ರೂ.9,72,745/- ಬೆಲೆಭಾಳುವ ಸೊತ್ತುಗಳನ್ನು ಮಾರಾಟ ಹಾಗೂ ಸರಬರಾಜು ಮಾಡಲು ವಶದಲ್ಲಿ ಇಟ್ಟುಕೊಂಡಿರುವುದನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ಪ್ರಕರಣ ಸಂಬಂಧಿಸಿದಂತೆ
ಬಂಟ್ವಾಳ ಗಣೇಶ್ ಕೋಡಿ ಹೌಸ್ ನ ಸಂತೋಷ್ (32), ಕುದ್ರೋಳಿಯ ಇಬ್ರಾಹಿಂ ಇರ್ಷಾದ್ (33) ಹಾಗೂ ಶಾಪ್ ನ ಮಾಲಕ ಶಿವು ದೇಶಕೋಡಿ ಎಂಬುವರ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಮೊ.ನಂ:104/2025 ಕಲಂ: 7 & 8 Prohibition of Electronic Cigarettes (Production, Manufacture, Import, Export, Transport, Sale, Distribution, Storage and Advertisement) Act 2019 ಮತ್ತು ಕಲಂ: 20(2) COTPA, Cigarettes and Other Tobacco Products Act (Amendment) Bill 2015 ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು