ಇತ್ತೀಚಿನ ಸುದ್ದಿ
ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ
08/01/2026, 11:25
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಪದಾರ್ಥ ಮಾರಾಟ ಮಾಡುತ್ತಿದ್ದ ಇಬ್ಬರು ಅಸ್ಸಾಂ ಮೂಲದ ವ್ಯಕ್ತಿ ಗಳನ್ನು ಬಂಧಿಸಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ.
ಅಸ್ಸಾಂ ರಾಜ್ಯದ ದರಾಂಗ್ ಗ್ರಾಮದ ಮುಸ್ತಾಪ ಅಲಿ ಮತ್ತು ಮಜುಬ್ ಅಲಿ ಎಂಬುವರು ಇಲ್ಲಿನ ಕುಯಂಗೇರಿ ಬಸ್ ತಂಗುದಾಣ ದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಬಂಧಿತರಿಂದ 234 ಗ್ರಾಂ ಮತ್ತು 155 ಗ್ರಾಂ ನಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.












