9:07 PM Tuesday22 - April 2025
ಬ್ರೇಕಿಂಗ್ ನ್ಯೂಸ್
Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್…

ಇತ್ತೀಚಿನ ಸುದ್ದಿ

ಅವಘಡ, ವಿಪತ್ತು ತಡೆಗೆ ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

20/03/2025, 20:24

ಮಂಗಳೂರು(reporterkarnataka.com): ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಕರೆ ನೀಡಿದ್ದಾರೆ.
ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.
ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ ಮೇಲೂ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸುರಕ್ಷತಾ ವ್ಯವಸ್ಥೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಜಂಟಿ ನಿರ್ದೇಶಕ ನರೇಂದ್ರಬಾಬು , ಎಂ.ಆರ್.ಪಿ.ಎಲ್ ರಿಫೈನರಿ ನಿರ್ದೇಶಕ ನಂದಕುಮಾರ್ ಪಿಲ್ಲೈ, ರಾಷ್ಟ್ರೀಯ ಸುರಕ್ಷತಾ ಕೌನ್ಸಿಲ್ ಮಂಗಳೂರು ಘಟಕದ ಸಮನ್ವಯಕಾರ ಪಿ.ಎಫ್ ಮರಿಯಣ್ಣನವರ್ ಉಪಸ್ಥಿತರಿದ್ದರು.
ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪ ನಿರ್ದೇಶಕ ಎಂ.ಎಸ್ ಮಹಾದೇವ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು