5:17 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

13/03/2025, 11:09

ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.


ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು 10 ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕನಿಷ್ಠ ಈ ಅಧಿವೇಶದಲ್ಲಾದರೂ ಎಲ್ಲಾ ರಿಕ್ಷಾ ಚಾಲಕರುಗಳು ಬಯಸುತ್ತಿರುವ ತಮಿಳುನಾಡು ಮಾದರಿಯ ಪರಿಹಾರ ಮಾರ್ಗವನ್ನು ಅನುಷ್ಠಾನಗೊಳಿಸಿದರೆ ರಿಕ್ಷಾ ಚಾಲಕ ಬಂಧುಗಳ ನಡುವಿನ ಗೊಂದಲ-ಘರ್ಷಣೆ ಕಡಿಮೆಯಾಗುತ್ತದೆ ಎಂದು ಶಾಸಕರು ಹೇಳಿದರು.
ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಕಾಮತ್ ರವರ ಸಲಹೆಗೆ ನನ್ನ ಸಹಮತವಿದ್ದು ಖಂಡಿತವಾಗಿಯೂ ಈ ಬಗ್ಗೆ ಅತೀ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು