3:40 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್

12/03/2025, 21:47

ಬೆಂಗಳೂರು (reporterkarnataka.com) : ಮಹಿಳಾ ಸಬಲೀಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ತ್ರೀ ಶಕ್ತಿ, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಮಹಿಳಾ ಸಹಾಯವಾಣಿ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಇಂದು ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಿವಮೊಗ್ಗ ವಿಧಾನಸಭಾ ಸದಸ್ಯ ಚನ್ನಬಸಪ್ಪ ಇವರ ಪ್ರಶ್ನೆಗೆ ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ, ಮಾಜಿ ದೇವದಾಸಿ ಮಹಿಳೆ ಪುನರ್ವಸತಿ ಯೋಜನೆ, ಮಾಜಿ ದೇವದಾಸಿಯರಿಗೆ ವಸತಿ ನಿರ್ಮಾಣ ಯೋಜನೆ, ಬಡ್ಡಿ ಸಹಾಯಧನ ಯೋಜನೆ, ಮಹಿಳಾ ತರಬೇತಿ ಯೋಜನೆ, ವೃದ್ಧಿ ಯೋಜನೆ, ಕಿರುಸಾಲ ಯೋಜನೆ, ಮಹಿಳೆಯರಿಗೆ ಬಡ್ಡಿ ಸಹಾಯಧನ ಯೋಜನೆ, ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸಾಲ ಸೌಲಭ್ಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಕ್ಕಳ ಹಕ್ಕು ರಕ್ಷಣೆ ಮಾಡುವಲ್ಲಿ ಪ್ರಸ್ತುತ ರಾಜ್ಯದಲ್ಲಿ 32 ಸರ್ಕಾರಿ ಬಾಲಕರ ಬಾಲಮಂದಿರ, 30ಸರ್ಕಾರಿ ಬಾಲಕಿಯರ ಬಾಲಮಂದಿರ, 0-6 ವರ್ಷದೊಳಗಿನ ಮಕ್ಕಳಿಗೆ 1 ಶಿಶುಮಂದಿರ, 4 ಬುದ್ದಿಮಾಂದ್ಯ ಮಕ್ಕಳ ಬಾಲಮಂದಿರ ಹಾಗೂ ಬಾಲಕರಿಗಾಗಿ 16 ವೀಕ್ಷಣಾಲಯ ಮತ್ತು ಬಾಲಕಿಯರಿಗಾಗಿ 1 ವೀಕ್ಷಣಾಲಯ 21 ಸರ್ಕಾರಿ ವಿಶೇಷ ದತ್ತು ಸಂಸ್ಥೆಗಳು, 23 ಸರ್ಕಾರೇತರ ವಿಶೇಷ ದತ್ತು ಸಂಸ್ಥೆಗಳು, 29 ತೆರೆದ ತಂಗುದಾಣಗಳು, 32 ನಿರ್ಗತಿಕ ಮಕ್ಕಳ ಕುಟೀರ, 5 ಅರ್ಹ ಸಂಸ್ಥೆ ಮತ್ತು 7 ಅನುಪಾಲನಾ ಗೃಹಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಕಾರ್ಮಿಕ ಸಚಿವರು ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು