ಇತ್ತೀಚಿನ ಸುದ್ದಿ
Important News : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ
14/07/2021, 13:46

ಮಂಗಳೂರು(ReporterKarnataka.com)
ಕೊರೊನಾ ಕಾರಣದಿಂದ ಬಾಕಿ ಉಳಿದಿರುವ ಮಂಗಳೂರು ವಿಶ್ವವಿದ್ಯಾಲಯ ಅಧೀನ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ತೀರ್ಮಾನಿಸಿದೆ ಎನ್ನಲಾಗಿದೆ.
ಪತ್ರಿಕೆಯೊಂದಕ್ಕೆ ವಿ.ವಿ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅವರು ತಿಳಿಸಿರುವ ಪ್ರಕಾರ ಬಾಕಿ ಪರೀಕ್ಷೆಯನ್ನು ಮಾಡಿ ಮೌಲ್ಯಮಾಪನಕ್ಕೆ ಚಿಂತನೆ ನಡೆಸಲಾಗಿದೆ. ಆಗಸ್ಟ್ 10ರೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರ 2, 4 ಹಾಗೂ 6ನೇ ಸೆಮಿಸ್ಟರ್‌ನ ಭೌತಿಕ ತರಗತಿ ಮಾಡಿ ಬಳಿಕ ಸೆಪ್ಟೆಂಬರ್ ವೇಳೆಗೆ ಇದರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ಎಲ್ಲದರ ಬಗ್ಗೆ ಸರಕಾರದಿಂದ ಅನುಮತಿ ಪಡೆಯುವ ಹಿನ್ನೆಲೆಯಲ್ಲಿ ಪತ್ರ ಬರೆದು ಅನುಮತಿ ಪಡೆಯಲಾಗುವುದು. ಸರಕಾರದ ಅನುಮತಿ ದೊರೆತ ಅನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
ಪರೀಕ್ಷೆ ನಡೆಸಬೇಕಾ? ಬೇಡವೇ ಎಂಬ ಬಗ್ಗೆ ಎಲ್ಲ ಕಾಲೇಜು ಪ್ರಾಂಶುಪಾಲರ ಸಭೆಯನ್ನು ನಡೆಸಲಾ ಗಿದ್ದು, ಪರೀಕ್ಷೆ ನಡೆಸುವ ಬಗ್ಗೆ ಹೆಚ್ಚಿನವರು ಒಲವು ತೋರಿದ್ದಾರೆ. ಶೇ. 70ರಷ್ಟು ಪರೀಕ್ಷೆ ಈಗಾಗಲೇ ನಡೆದಿದ್ದು ಶೇ. 30ರಷ್ಟು ಮಾತ್ರ ಬಾಕಿ ಉಳಿದಿವೆ. ಅದನ್ನು ಮುಂದಿನ ದಿನದಲ್ಲಿ ನಡೆಸುವ ಬಗ್ಗೆ ಶೀಘ್ರ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪಿ.ಎಲ್.ಧರ್ಮ ತಿಳಿಸಿದ್ದಾರೆ.