8:59 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ‌ ಮನ್ನಣೆ; ಬಿಜೆಪಿಯಲ್ಲಿ ದ್ವೇಷ ಭಾಷಣ ಮಾಡುವವರಿಗೆ ಮಣೆ: ಮಾಜಿ ಸಚಿವ ರೈ

01/08/2026, 15:40

ಮಂಗಳೂರು(reporterkarnataka.com); ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ‌ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರ ಶಾಸಕತ್ವ ರದ್ದುಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಮಾನಾಥ ರೈ ಆಗ್ರಹಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿಯ ಶಾಸಕ ಯಶ್ ಪಾಲ್ ಸುವರ್ಣ ನೀಡಿರುವ ಹೇಳಿಕೆ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಇಲ್ಲಿನ ರಾಜಾಜಿ ಪಾರ್ಕ್‌ನ ಮಹಾತ್ಮ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.





ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದಾಗ ಅವರನ್ನು ದೇಶದ್ರೋಹಿ ಎಂದು ಬಿಂಬಿಸುವ ಪ್ರಯತ್ನ ನಡೆಯಿತು. ಆದರೆ, ನನ್ನ ಅಭಿಪ್ರಾಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಬೆಂಬಲಿಸದವರು ದೇಶದ್ರೋಹಿಗಳು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು