ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ: 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕೇಂದ್ರ ಒಪ್ಪಿಗೆ
26/04/2021, 07:19
ಬೆಂಗಳೂರು(reporterkarnataka news):
ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಲಸಿಕೆ ಸಮಸ್ಯೆ ಶೀಘ್ರದಲ್ಲೇ
ಬಗೆಹರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯಕ್ಕೆ ಹೆಚ್ಚುವರಿಯಾಗಿ 300ರಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿದೆ. ಅಲ್ಲದೇ 50,000ರಿಂದ 1,22,000 ರೆಮ್ ಡಿಸಿವಿರ್ ಲಸಿಕೆ ನೀಡುವುದಾಗಿ ಭರವಸೆ ನೀಡಿದೆ ಎಂದರು.