12:11 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪ ವಿಭಾಗ ಕಚೇರಿ ಉದ್ಘಾಟನೆ: ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ

05/12/2025, 20:46

ಬೆಂಗಳೂರು(reporterkarnataka.com): ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದರು.


ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇದುವರೆಗೆ ವೈಟ್‌ಫೀಲ್ಡ್ ವಿಭಾಗ ಹಾಗೂ ಇ-4 ಉಪವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಇಮ್ಮಡಿಹಳ್ಲಿ ಮುಖ್ಯರಸ್ತೆಯ ಗಾಂಧೀಪುರದಲ್ಲಿ ನಿರ್ಮಾಣಗೊಂಡಿರುವ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದ್ದು ಗ್ರಾಹಕರಿಗೆ ಅನುಕೂಲಕರವಾಗಲಿದೆ,” ಎಂದರು.
ಈ ಜಾಗ ಪಡೆಯಲು ನೆರವಾದ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಅವರಿಗೆ ಧನ್ಯವಾದ ಹೇಳಿದ ಸಚಿವರು, “ನಗರದ ಪ್ರಮುಖ ಪ್ರದೇಶವಾಗಿರುವ ವೈಟ್‌ಫೀಲ್ಡ್‌ನಲ್ಲಿ ವಿಭಾಗದಲ್ಲಿ 3,88,917 ಕ್ಕೂ ಹೆಚ್ಚಿನ ಗ್ರಾಹಕರಿದ್ದಾರೆ. ಸಾರ್ವಜನಿಕರಿಗೆ ನೂತನ ಕಚೇರಿ ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹದೇವಪುರ ಕ್ಷೇತ್ರ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ‌ ನಿರ್ದೇಶಕ ಡಾ.ಎನ್.ಶಿವಶಂಕರ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

*ಹೊಸ ಕಟ್ಟಡದ ವಿಶೇಷತೆ:*
13,687 ಚದರ ಅಡಿಯ ನೆಲ ಅಂತಸ್ತು ಸೇರಿದಂತೆ ಮೂರು ಅಂತಸ್ತುಗಳ ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಉಪ ವಿಭಾಗ ಕಚೇರಿ ಕಟ್ಟಡವನ್ನು ಅಂದಾಜು 4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು