4:56 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ನೇಮಕಾತಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ವಿಧಾನ ಪರಿಷತ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

11/12/2025, 19:50

ಬೆಳಗಾವಿ(reporterkarnataka.com): ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.
ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು