ಇತ್ತೀಚಿನ ಸುದ್ದಿ
ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ
12/12/2025, 09:28
ಬೆಂಗಳೂರು(reporterkarnataka.com): ಕಳೆದ ಒಂದು ತಿಂಗಳಲ್ಲಿ ಹಲವಾರು ತಾಂತ್ರಿಕ ವಲಯದಲ್ಲಿ ಬಹಳ ಪರಿಣಿತಿ ಹೊಂದಿರುವ ಕಂಪನಿಗಳಾದ ಮೈಕ್ರೊಸಾಫ್ಟ್, ಗೂಗಲ್, ಅಮೇಜಾನ್ ಕಂಪನಿಗಳು ಭಾರತ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಹಣ ಹೂಡಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಆಶಿರ್ವಾದದೊಂದಿಗೆ ಹಣ ಹೂಡಲು ಒಪ್ಪಂದ ಮಾಡಿಕೊಂಡಿವೆ. ಇದು ಭಾರತ ಪ್ರಬಲ ಆರ್ಥಿಕ ಶಕ್ತಿ ಎಂಬುದನ್ನು ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಈ ಸಂಸ್ಥೆಗಳಿಗೆ ಏನೆಲ್ಲ ಕಾನೂನು ಅಡಚಣೆ ಮಾಡಿದರೂ, ಭಾರತದ ನಾಯಕತ್ವ ನರೇಂದ್ರ ಮೋದಿಯವರ ಮೇಲೆ ನಂಬಿಕೆ ಇಟ್ಟು ಮತ್ತು ಭಾರತದಲ್ಲಿರುವ ತಾಂತ್ರಿಕ ಪರಿಣಿತ ಯುವಕರ ಮೇಲೆ ನಂಬಿಕೆ ಇಟ್ಟು ಹೂಡಿಕೆ ಮಾಡಿದ್ದಾರೆ. ಇದು ಅಭಿವೃದ್ದಿಗೆ ದೊಡ್ಡ ಇಂಬು ಕೊಡುವಂತದ್ದು, ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಎಫ್ ಡಿಐ ಹೂಡಿಕೆ ಆಗುತ್ತಿರುವುದು ಸಂತಸದ ಸಂಗತಿ. ಪ್ರಧಾನಿ ನರೇಂದ್ರ ಮೋದಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ಎಲ್ಲ ಕಂಪನಿಗಳಿಗೆ ಶುಭ ಕೋರುತ್ತೇನೆ ಎಂದು ತಿಳಿಸಿದ್ದಾರೆ.













