11:11 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಇಂಧನ ದರ ಭಾರಿ ಇಳಿಕೆ: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್‌, ಡಿಸೇಲ್‌ ಬೆಲೆ ಎಷ್ಟಿದೆ ನೋಡಿ

22/05/2022, 21:39

ಹೊಸದಿಲ್ಲಿ(reporterkarnataka.com): ಪೆಟ್ರೋಲ್‌, ಡಿಸೇಲ್‌, ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರಕಾರ ಗುಡ್‌ನ್ಯೂಸ್‌ ನೀಡಿದೆ.

ಇಂಧನದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಇಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ.

ಪೆಟ್ರೋಲ್ ದರದ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್‌ ಮೇಲೆ 6 ರೂಪಾಯಿ ಇಳಿಸಲಾಗುವುದು ಎಂದು ನಿನ್ನೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದರು. ಇದರ ಬೆನ್ನಲ್ಲೇ ಇಂದು ಪೆಟ್ರೋಲ್‌, ಡಿಸೇಲ್‌ ಬೆಲೆ ಇಳಿಕೆಯಾಗಿದೆ.

ಪ್ರಮುಖ ನಗರಗಳಲ್ಲಿ ಇಂದಿನ ದರ ವಿವರ:

ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್‌ಗೆ ಬೆಲೆ ಸದ್ಯ 101.94ರೂ. ಮತ್ತು ಡೀಸೆಲ್ 87.89 ರೂಪಾಯಿ ಇದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 96.72 ರೂಪಾಯಿ ಇದ್ದರೆ, ಲೀಟರ್‌ ಡೀಸೆಲ್ ಬೆಲೆ 89.62 ರೂಪಾಯಿ ಇದೆ. ಇನ್ನೂ, ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ. ಇದ್ದರೆ, ಡೀಸೆಲ್ ಬೆಲೆ 92.76 ಇದೆ. ಮಹಾರಾಷ್ಟ್ರದ ಮುಂಬೈಯಲ್ಲಿ ಪೆಟ್ರೋಲ್ ಬೆಲೆ 111.35 ರೂ. ಇದ್ದರೆ, ಡೀಸೆಲ್ ಬೆಲೆ 97.28 ರ. ಇದೆ. ಹಾಗೆಯೇ, ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 102.63 ರೂ. ಇದ್ದು, ಡೀಸೆಲ್ಬೆಲೆ 94.24 ರೂ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು