10:43 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇಂದು ಹುಟ್ಟೂರು ಪಂಚಮಹಳ್ಳಿಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ

15/06/2021, 07:00

ಚಿಕ್ಕಮಗಳೂರು(reporterkarnataka news): ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ಕಡೂರಿನ ಪಂಚಮಹಳ್ಳಿಯಲ್ಲಿ ಇಂದು ನಡೆಯಲಿದೆ.

ಅದಕ್ಕೆ ಮುನ್ನ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಇಡಲಾಗುವುದು. ಬೆಳಗ್ಗೆ 8ರಿಂದ 10 ಗಂಟೆ ವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ಬಳಿಕ ಅಂತ್ಯ ಸಂಸ್ಕಾರ ನಡೆಯುವ ಸಾಧ್ಯತೆಗಳಿವೆ.

ಜೀವ ಸಾರ್ಥಕ್ ಫೌಂಡೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ಈ ನಡುವೆ ಕುಟುಂಬದ ಅನುಮತಿ ಮೇರೆಗೆ ನಡೆಸಲಾಗಿದೆ.

‘ರಂಗಪ್ಪ ಹೋಗಿಬಿಟ್ನಾ’ ಸಿನಿಮಾದ ಮೂಲಕ ಸಂಚಾರಿ ವಿಜಯ್ ಚಿತ್ರರಂಗ ಪ್ರವೇಶಿಸಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ ಪ್ರಸಿದ್ಧರಾಗಿದ್ದರು. ಸುಮಾರು 24 ಸಿನಿಮಾಗಳಲ್ಲಿ ಅವರು ನಟಿಸಿದ್ದರು. ರಾಷ್ಟ್ರ ಪ್ರಶಸ್ತಿ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು