6:28 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಭಾರತ- ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ಗಡಿ ಜಿಲ್ಲೆಗಳ ಶಾಲಾ- ಕಾಲೇಜ್ ಬಂದ್; ಮುಚ್ಚಿದ ಏರ್ ಪೋರ್ಟ್; ಹೈ ಆಲರ್ಟ್​ ಘೋಷಣೆ

08/05/2025, 15:40

ಚಂಡೀಗಢ(reporterkarnataka.com): ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಕಳೆದಂತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ​ ಪಾಕ್​ ಗಡಿ ಹೊಂದಿಕೊಂಡಿರುವ ಪಂಜಾಬ್ ನ 6 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಬಂದ್​ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ದೇಶದ ಗಡಿ ರಾಜ್ಯಗಳಲ್ಲಿ ಹೈ ಆಲರ್ಟ್​ ಘೋಷಿಸಲಾಗಿದೆ.
ಪಂಜಾಬಿನ‌ ಫಿರೋಜ್​ಪುರ್​, ಪಠಾಣ್​ಕೋಟ್​, ಫಜಿಲ್ಕಾ, ಅಮೃತ್​ಸರ್​, ಗುರುದಾಸ್​ಪುರ್​​ ಮತ್ತು ತರಣ್ ತರಣ್​ ಜಿಲ್ಲೆಗಳಲ್ಲಿ ಶಾಲೆಗಳು ಬಂದ್​ ಆಗಲಿದೆ. ಬುಧವಾರ ನಸುಕಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್​ ಆಕ್ರಮಿತ ಪ್ರದೇಶದಲ್ಲಿ ಉಗ್ರರ
ಅಡಗುತಾಣದ ಮೇಲೆ ದಾಳಿ ನಡೆಸಿತ್ತು. ಜೈಶ್​ ಎ ಮೊಹಮ್ಮದ್​​ ಭದ್ರಕೋಟೆಯಾದ ಬಹವಾಲ್ಪುರ್ ಹಾಗೂ ಲಷ್ಕರ್​ ಎ ತೋಯ್ಬಾದ ಮುರಿಡ್ಕೆ ನೆಲೆಗಳು ಸೇರಿದಂತೆ 9 ಉಗ್ರರ ಅಡುಗುತಾಣಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಪಾಕ್ ಹಾಗೂ ಪಾಕ್ ಆಕ್ರಮಿತ ಪ್ರದೇಶ ಕೂಡ ಸೇರಿತ್ತು. ಭಾರತೀಯ ವಾಯುಸೇನೆ ಸುಮಾರು 70 ಕಿಮೀ. ಒಳ ನುಗ್ಗಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು‌
ತರಣ್ ತರಣ್ ಜಿಲ್ಲೆಯ ಉಪ ಆಯುಕ್ತರು ಜಿಲ್ಲೆಯ ಎಲ್ಲಾ ಶಾಲೆಗಳು ಮೇ 8ರಿಂದ 11ರವರೆಗೆ ಮುಚ್ಚಲ್ಪಡುತ್ತವೆ ಎಂದು ಆದೇಶ ಹೊರಡಿಸಿದ್ದಾರೆ. ಫಿರೋಜ್‌ಪುರದಲ್ಲಿ, ಮುಂದಿನ 72 ಗಂಟೆಗಳ ಕಾಲ ಶಾಲೆಗಳನ್ನು ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ. ಫಜಿಲ್ಕಾ ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲೆಗಳು ಬಂದ್​ ಆಗಿರಲಿವೆ. ಇದರ ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರದಿಂದಲೇ ಚಂಢೀಗಢ, ಅಮೃತ್​ಸರ ಸೇರಿದಂತೆ ಸುಮಾರು 18 ವಿಮಾನ ನಿಲ್ದಾಣಗಳನ್ನು ಬಂದ್​ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು