8:07 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡ

05/08/2021, 09:38

reporterKarnataka.com

ಒಲಿಂಪಿಕ್ಸ್‌ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ಮೂಲಕ ಭಾರತ ಹಾಕಿ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಟೈಮೂರ್ ಗೋಲು ಬಾರಿಸುವ ಮೂಲಕ ಜರ್ಮನಿಗೆ 1-0 ಮುನ್ನಡೆ ಒದಗಿಸಿಕೊಟ್ಟರು. ಇದರೊಂದಿಗೆ ಮೊದಲ ಕ್ವಾರ್ಟರ್‌ನಲ್ಲಿ ಜರ್ಮನಿ 1-0 ಮುನ್ನಡೆ ಕಾಯ್ದುಕೊಂಡಿತು. ಇನ್ನು ಎರಡನೇ ಕ್ವಾರ್ಟರ್‌ನಲ್ಲಿ ಕಮ್‌ಬ್ಯಾಕ್‌ ಮಾಡುವಲ್ಲಿ ಭಾರತ ಯಶಸ್ವಿಯಾಯಿತು. ಎರಡನೇ ಕ್ವಾರ್ಟರ್‌ನಲ್ಲಿ ಭಾರತ ಮೂರು ಗೋಲು ಬಾರಿಸಿದರೆ, ಜರ್ಮನಿ ಎರಡು ಗೋಲು ಬಾರಿಸಿತು. ಇದರೊಂದಿಗೆ ಮೊದಲಾರ್ಧ ಮುಕ್ತಾಯದ ವೇಳೆಗೆ 3-3ರ ಸಮಬಲ ಸಾಧಿಸಿತು.

ಇನ್ನು ಮೂರನೇ ಕ್ವಾರ್ಟರ್‌ನಲ್ಲಿ ಮತ್ತಷ್ಟು ಆಕ್ರಮಣಕಾರಿ ಪ್ರದರ್ಶನ ತೋರಿದ ಮನ್‌ಪ್ರೀತ್‌ ಪಡೆ ಮತ್ತೆರಡು ಗೋಲು ಬಾರಿಸುವ ಮೂಲಕ ಭಾರತಕ್ಕೆ 5-3ರ ಮುನ್ನಡೆ ಒದಗಿಸಿಕೊಟ್ಟಿತು. ಇನ್ನು ಕೊನೆಯ ಕ್ವಾರ್ಟರ್‌ನಲ್ಲಿ ಜರ್ಮನಿ ಕೇವಲ ಒಂದು ಗೋಲು ಗಳಿಸಲಷ್ಟೇ ಶಕ್ತವಾಯಿತು.

ಭಾರತ ಹಾಕಿ ತಂಡವು 1980ರ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಜರ್ಮನಿಗೆ ಬರೋಬ್ಬರಿ 13 ಪೆನಾಲ್ಟಿ ಕಾರ್ನರ್‌ ಗಳಿಸುವ ಅವಕಾಶವಿದ್ದರೂ ಕೇವಲ ಒಂದು ಗೋಲು ಗಳಿಸಲಷ್ಟೇ ಜರ್ಮನಿ ಶಕ್ತವಾಯಿತು. ಗೋಲ್ ಕೀಪರ್ ಶ್ರೀಜೆಶ್ ಕೂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು