3:59 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಇಂಡಿಯನ್ ರೆಡ್ ಕ್ರಾಸ್ ಘಟಕದ ವತಿಯಿಂದ ಕೊಲ್ಲಮೊಗರು ವಿಕಲಚೇತನರಿಗೆ ಗಾಲಿ ಖುರ್ಚಿ ವಿತರಣೆ: ಎ.ಜೆ.ವೈದ್ಯಕೀಯ ಸಂಸ್ಥೆಗಳಿಂದ ಆರೋಗ್ಯ ತಪಾಸಣಾ ಶಿಬಿರ

14/02/2024, 21:44

ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ (ರಿ) ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್, ಹರಿಹರ ಗ್ರಾಮ ಪಂಚಾಯತ್, ಕೊಲ್ಲಮೊಗರು ಗ್ರಾಮ ಪಂಚಾಯತ್, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಫೆ.10ರಂದು ಕೊಲ್ಲಮೊಗರು ಸರಕಾರಿ ಶಾಲೆ ಬಂಗ್ಲೆಗುಡ್ಡೆಯಲ್ಲಿ ನಡೆದ 5ನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ದಲ್ಲಿ ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಎರಡು ಗಾಲಿ ಖುರ್ಚಿ ಗಳನ್ನು ಕೊಲ್ಲಮೊಗರು ಗ್ರಾಮದ ಹರಿಶ್ಚಂದ್ರ ಜಾಲು ಮನೆ ಹಾಗೂ ಕಲ್ಮಕಾರ್ ಗ್ರಾಮದ ರುಕ್ಮಯ ಕಲ್ಮಕಾರ್ ಅವರಿಗೆ ವಿತರಿಸಿದರು.
ಎ.ಜೆ.ಆಸ್ಪತ್ರೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಕೇಂದ್ರ ದ ವೈದ್ಯರ ತಂಡದ ಮೂಲಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ , ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ತಹಶೀಲ್ದಾರ್ ಮಂಜುನಾಥ್, ಡಿಎಪ್ಒ ಆಂಟೋನಿ ಮರಿಯಪ್ಪ, ಕೊಲ್ಲಮೊಗ್ರು ಗ್ರಾ.ಪಂ‌. ಅಧ್ಯಕ್ಷೆ ಜಯಶ್ರೀ ಚಾಂತಾಳ, ಹರಿಹರ ಗ್ರಾ.ಪಂ. ಅಧ್ಯಕ್ಷ ವಿಜಯ ಅಂಙಣ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.
“ಪತ್ರಕರ್ತರ ಗ್ರಾಮ ವಾಸ್ತವ್ಯ ಒಂದು ಮಾದರಿ ಕಾರ್ಯಕ್ರಮ. ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ವಿಕಲಚೇತನರನ್ನು ಗುರುತಿಸಿ ಅವರಿಗೆ ಇಂಡಿಯನ್ ರೆಡ್ ಕ್ರಾಸ್ ವತಿಯಿಂದ ಗಾಲಿ ಖುರ್ಚಿ ಯನ್ನು ಅರ್ಹರಿಗೆ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮೂಲಕ ಅವಕಾಶವಾಗಿದೆ “ಎಂದು ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಶಾಂತರಾಮ ಶೆಟ್ಟಿ ಸಿ.ಎ. ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು