10:36 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ ಅಂತಿಮ ನಮನ

15/06/2026, 20:48

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಇಂದು ನಿಧನರಾದ ಪ್ರಸಿದ್ಧ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮಾಜಿ ಸಿಎಂ ಸಿದ್ಧರಾಮಯ್ಯ ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಇಂದಿರಾ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಕವಿತಾ ಲಂಕೇಶ್ ಹಾಗೂ ಅವರ ಕುಟುಂಬದವರು, ಪ್ರಕಾಶ್ ರಾಜ್ ಇದ್ದರು.

*ಸಂತಾಪ:*
ಪ್ರಸಿದ್ಧ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸಾಹಿತ್ಯ, ಮಾಧ್ಯಮ ಮತ್ತು ಸಿನೆಮಾ ಕ್ಷೇತ್ರಗಳಲ್ಲಿ ಲಂಕೇಶ್ ಅವರು ಮಾಡಿರುವ ಸಾಧನೆಯಲ್ಲಿ ಅವರಿಗೆ ಬೆಂಬಲವಾಗಿ ನಿಂತಿದ್ದ ಇಂದಿರಾ ಲಂಕೇಶ್ ಅವರ ಬಹುದೊಡ್ಡ ಕೊಡುಗೆ ಇದೆ ಎನ್ನುವುದು ನಿಸ್ಸಂಶಯ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು