3:17 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಇಂಡಿಯಾದ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ನೇಮಕ: ವರ್ಷಕ್ಕೆ ಇವರ ವೇತನ ಎಷ್ಟು ಗೊತ್ತೇ? 

17/10/2021, 11:38

ಹೊಸದಿಲ್ಲಿ(reporterkarnataka.com): ಇಂಡಿಯಾದ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ನೇಮಕ ಮಾಡಲಾಗಿದೆ. 

ಟಿ20 ವಿಶ್ವಕಪ್‌ ಬೆನ್ನಲ್ಲೇ ಕೋಚ್‌ ರವಿಶಾಸ್ತ್ರಿ ಅವರ ಗುತ್ತಿಗೆ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲೀಗ ರಾಹುಲ್‌ ಅವರನ್ನು ಎರಡು ವರ್ಷಗಳ ಅವಧಿಗೆ ಮುಖ್ಯ ಕೋಚ್‌ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಅಧಿಕೃತ ಆದೇಶ ನೀಡಿದೆ‌.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ರಾಹುಲ್‌ ದ್ರಾವಿಡ್‌ ಅವರು ಭಾರತ ತಂಡ ಮುಖ್ಯ ಕೋಚ್‌ ಆಗಿ ನೇಮಕಗೊಳ್ಳುವ ಮುನ್ನ ಎನ್‌ಸಿಎ ಮುಖ್ಯಸ್ಥರ ಹುದ್ದೆಯನ್ನು ತ್ಯಜಿಸಲಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ, ಟೀಂ ಇಂಡಿಯಾ ಕೋಚ್‌ ಆಗಲು ರಾಹುಲ್‌ ದ್ರಾವಿಡ್‌ಗೆ ಬಿಗ್‌ ಆಫ್‌ ನೀಡಿದೆ. ರಾಹುಲ್‌ ಪ್ರತೀ ವರ್ಷ ಸುಮಾರು 10 ಕೋಟಿ ರೂಪಾಯಿ ವೇತನವನ್ನು ಪಡೆಯಲಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು