4:29 AM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!!

25/10/2021, 22:17

ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು.

ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸಭೆಯ ಸಂದರ್ಭಗಳಲ್ಲಿ ಸದಸ್ಯರಿಗೆ ನೀಡುವ ಉಪಹಾರದ ಗುಣಮಟ್ಟ ಚೆನ್ನಾಗಿ ಇಲ್ಲ. ಇಂತಹ ಉಪಹಾರವನ್ನ ನಮಗೆ ನೀಡಿ ಹೆಚ್ಚಿನ ಹಣವನ್ನು ಹೋಟೆಲ್ ಗಳಿಗೆ ಪಾವತಿಸುತ್ತೀರ ಎಂದು ವ್ಯಂಗ್ಯ ವಾಗಿ ಸಭೆಯಲ್ಲಿ ಸದಸ್ಯರನ್ನು ನಗಿಸಿದ್ದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರೊಬ್ಬರು ಉಪಹಾರ, ಊಟ ಮುಂದಿನ ಸಭೆಗೆ ಇಂದಿರಾ ಕ್ಯಾಂಟೀನ್ ನಿಂದ ತರಿಸುವ ಎಂದು ಪ್ರತ್ಯುತ್ರರ ನೀಡಿದರು. ಅದನ್ನೇ ಮುಖ್ಯ ವಿಷಯವಾಗಿ ತೆಗೆದುಕೊಂಡು ಸದಸ್ಯರು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ನಿಂದಲೇ ಊಟದ ವ್ಯವಸ್ಥೆ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದರೆ ಪಾರ್ಸೆಲ್ ವ್ಯವಸ್ಥೆ ಇಲ್ಲದ ಕಾರಣ ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಗೆ ತೆರಳಿ ಮಧ್ಯಾಹ್ನದ ಭೋಜನದ ರುಚಿ ಸವಿದರು.  ಇಂದಿರಾ ಕ್ಯಾಂಟೀನ್ನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು