5:09 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಡ್ರೈವರ್ ಜತೆ ಲವ್: ಮಗಳಿಗೆ ಆಯ್ಕೆಯ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್‌

15/06/2022, 09:44

ಮುಂಬೈ(reporterkarnataka.com): ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ.

ಡ್ರೈವರ್ ಜೊತೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಪುತ್ರಿಗಾಗಿ ತಂದೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದರು.

ಈ ಬಗ್ಗೆ ಹೈಕೋರ್ಟ್‌ ಚರ್ಚೆ ವಿಚಾರಣೆ ನಡೆಸಿ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ತಂದೆ-ತಾಯಿಯರಿದ್ದಾರೆ. ತಂದೆ-ತಾಯಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ಮಕ್ಕಳಿದ್ದಾರೆ. ಪರಸ್ಪರ ಪ್ರೀತಿಯಿದ್ದರೆ ಇಂತಹ ಸ್ಥಿತಿ ಉದ್ಭವಿಸುವುದಿಲ್ಲ. ತಂದೆ ತಾಯಿಗಿಂತ ದೇವರಿಲ್ಲ, ಅವರ ಋಣ ತೀರಿಸಲಾಗಲ್ಲ ಎಂದು ಮನುಸ್ಮೃತಿಯಲ್ಲಿನ ವಾಕ್ಯವನ್ನು ಉಲ್ಲೇಖಿಸಿದೆ.

ಪ್ರೇಮ ಕುರುಡಾಗಿರುವುದರಿಂದ ಪೋಷಕರ ಪ್ರೀತಿ ಕಾಣುವುದಿಲ್ಲ. ಇಂದು ಹೆತ್ತವರಿಗೆ ಮಾಡಿದ್ದೇ ನಾಳೆ ಮಕ್ಕಳಿಗೂ ಆಗಬಹುದು ಎಂದು ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರ ಪೀಠ ಅಭಿಪ್ರಾಯ ಪಟ್ಟಿದೆ.

ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ.

ಇತ್ತ ಪೋಷಕರೊಂದಿಗೆ ತೆರಳಲು 19 ವರ್ಷದ ಮಗಳು ನಕಾರ ಮಾಡಿದ್ದು ವಯಸ್ಕಳಾಗಿರುವುದರಿಂದ ಪ್ರೀತಿಸಿ ವಿವಾಹವಾಗಿರುವುದಾಗಿ ಹೇಳಿದ್ದಾಳೆ. ಹಾಗೂ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುವುದಾಗಿ ಪ್ರಿಯಕರ ಕೂಡ ಕೋರ್ಟ್‌ಗೆ ಭರವಸೆ ನೀಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು