10:50 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಇನ್ನಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ ತಯಾರಿ:  ಶಾಸಕ ವೇದವ್ಯಾಸ್ ಕಾಮತ್ 

11/06/2022, 23:22

ಮಂಗಳೂರು(reporterkarnataka.com): ನಗರದಲ್ಲಿ ಅಜೀರ್ಣಾವಸ್ಥೆಯಲ್ಲಿದ್ದ ಅನೇಕ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 

ಇನ್ನಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಸೆಂಟ್ರಲ್ ವಾರ್ಡಿನ ಬಜಿಲಕೇರಿ ಶ್ರೀ ಮುಖ್ಯಪ್ರಾಣ ದೇವಸ್ಥಾನದ ಕೆರೆಯ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಜಿಲಕೇರಿ ಶ್ರೀ ಮುಖ್ಯಪ್ರಾಣ ದೇವಸ್ಥಾನಕ್ಕೆ ಸಂಬಂಧಪಟ್ಟ ಕೆರೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಧಾರ್ಮಿಕತೆಯ ಭಾಗವಾಗಿರುವ ಪುರಾತನ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಹೇಳಿದರು.

ಮಂಗಳೂರು ನಗರದಲ್ಲಿ ಅನೇಕ ಕೆರೆಗಳು ದಾಖಲೆಯಲ್ಲಿ ಮಾತ್ರವೇ ಉಳಿದಿದೆ. ಅಂತಹ ಅನೇಕ ಕೆರೆಗಳನ್ನು ಗುರುತಿಸಿದ್ದು ಹಂತ ಹಂತವಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಕೆರೆಗಳ ಸಂರಕ್ಷಣೆಯಲ್ಲಿ ಸ್ಥಳೀಯರು ಕೂಡ ನಮ್ಮೊಂದಿಗೆ ಕೈ ಜೋಡಿಸಿ ಪ್ರಾಕೃತಿಕ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಲು ಸಹಕರಿಸಬೇಕು ಎಂದು ಹೇಳಿದ್ದಾರೆ. 

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್ ಮಾತನಾಡಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆರೆ ಹಾಗೂ ಪಾರ್ಕ್ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ. ಶಾಸಕರ ಸಹಕಾರದೊಂದಿಗೆ ಈಗಾಗಲೇ ವಿವಿಧ ಕೆರೆಗಳ ಅಭಿವೃದ್ಧಿ ಪ್ರಗತಿ ಸಾಧಿಸುತ್ತಿದೆ. ನಗರದ ಪಾರ್ಕ್ ಗಳ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು‌. 

ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಭಾಸ್ಕರ್, ಕರಣಿಕ ಶ್ರೀ ಮುಖ್ಯಪ್ರಾಣ ದೇವಸ್ಥಾನದ ಮುಖ್ಯ ಅರ್ಚಕರಾದ ಗುರುರಾಜ್ ಭಟ್ , ಪ್ರಮುಖರಾದ ಮುರಳೀಧರ ನಾಯಕ್, ರಮೇಶ್ ಹೆಗ್ಡೆ, ಪೂರ್ಣಿಮ ರಾವ್, ಚಂದ್ರಕಾಂತ್ ನಾಯಕ್, ವಿಕ್ರಂ ರಾವ್, ಗಣೇಶ್ ನಾಯಕ್,  ಕೇದರ್, ಗಿರೀಶ್ ಕುಮಾರ್, , ಸೌಮ್ಯ ರೈ, ಪಿ.ಸಿ ಗುರು, ಪ್ರಮೋದ್ ಆಚಾರ್ಯ, ಹರಿಪ್ರಸಾದ್, ಅಮರ್,  ವಸಂತ ಜೆ ಪೂಜಾರಿ, ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು