5:15 AM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಪ್ರತಿಮೆ ಸ್ಥಾಪನೆ: ಮಾಜಿ ಸಭಾಪತಿ ವಿ. ಆರ್. ಸುದರ್ಶನ್ ಸಲಹೆ

03/02/2026, 13:10

ಬಂಟ್ವಾಳ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಶ್ಚಂದ್ರ ಭೋಸ್ ಅವರೊಂದಿಗೆ ಜೊತೆಯಾಗಿ ಶ್ರಮಿಸಿದ್ದ ಗಾಣಿಗ ಸಮುದಾಯದ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಪ್ರತಿಮೆ ಮಂಗಳೂರು ನಗರದಲ್ಲಿ ನಿರ್ಮಿಸಲು ಪಕ್ಷಾತೀತವಾಗಿ ಎಲ್ಲರೂ
ಮುಂದಾಗಬೇಕು
ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ. ಆರ್. ಸುದರ್ಶನ್ ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ಗಾಣಿಗರ ಸೇವಾ ಸಂಘದ ವತಿಯಿಂದ ಗಾಣಿಗ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಸಹಭಾಗತ್ವದಲ್ಲಿ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಬ್ಯಾ ಡ್ಮಿಂಟನ್ ಆಟಗಾರ್ತಿ ಜಯಲಕ್ಷ್ಮಿ ಗಾಣಿಗ ಕಡೇಶ್ವಾಲ್ಯ ಅವರನ್ನು ಸನ್ಮಾನಿಸಲಾಯಿತು.
ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾಸರಗೋಡು ಮತ್ತು ಉಡುಪಿ ಸಹಿತ ಅವಿಭಜಿತ ಜಿಲ್ಲಾ ಮಟ್ಟದ ‘ಗಾಣಿಗ ಕ್ರೀಡೋತ್ಸವ’ ದಲ್ಲಿ ಅವರು ಮಾತನಾಡಿದರು.
ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಅಧ್ಯಕ್ಷತೆ ವಹಿಸಿದ್ದರು.
ಮುಂಬೈ ಗಾಣಿಗ ಸಂಘದ ಅಧ್ಯಕ್ಷ ಶ್ರೀನಿವಾಸ ಸಾಫಲ್ಯ ರಾಯಿ ಕ್ರೀಡೋತ್ಸವ ಉದ್ಘಾಟಿಸಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಅವರು ಅಂತಾರಾಷ್ಟ್ರೀಯ ಮಟ್ಟದ ಈಜುಗಾರ್ತಿ ಲಕ್ಷ್ಮೀ ವಿಟ್ಲ ಅವರನ್ನು ಸನ್ಮಾನಿಸಿ ಮಾತನಾಡಿದರು.

ಅಖಿಲ ಕರ್ನಾಟಕ ಗಾಣಿಗ ಸಂಘದ ಅಧ್ಯಕ್ಷ ರಾಜಶೇಖರ್ ಮಾತನಾಡಿ, ‘ ರಾಜ್ಯದ 16 ಜಿಲ್ಲೆಗಳಲ್ಲಿ ಗರಿಷ್ಠ ಸಂಖ್ಯೆ ಹೊಂದಿರುವ ಗಾಣಿಗ ಸಮಾಜಕ್ಕೆ ರಾಜಕೀಯ ಪ್ರಾಧಾನ್ಯತೆ ಸಹಿತ ಸಮುದಾಯ ಭವನ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಲು ಸೂಕ್ತ ಜಮೀನು ಮತ್ತು ಅನುದಾನ ಒದಗಿಸಬೇಕು ‘ ಎಂದರು.
ರಾಜ್ಯ ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಉದ್ಯಮಿ ಮಾಧವ ಮಾವೆ ಶುಭ ಹಾರೈಸಿದರು.
ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮ ಮುಗರೋಡಿ, ಮಂಗಳೂರು ತಾಲೂಕು ಸಂಘದ ಅಧ್ಯಕ್ಷ ರಾಘವ ಪಡೀಲ್,  ಪುತ್ತೂರು ಗಾಣಿಗ ಸಂಘದ ಅಧ್ಯಕ್ಷ ಹರಿರಾಮಚಂದ್ರ, ಉಳ್ಳಾಲ ಗಾಣಿಗ ಸಂಘದ ಅಧ್ಯಕ್ಷ ಸುನಿಲ್ ಕುಮಾರ್, ಪುತ್ತೂರು
ಯುವ ವೇದಿಕೆ ಅಧ್ಯಕ್ಷ ಪ್ರಸಾದ್ ಪುತ್ತೂರು,
ಎಡಪದವು ಸಂಘದ ಅಧ್ಯಕ್ಷ ಭಾಸ್ಕರ್ ಎಡಪದವು, ಬಿಲ್ಲವ ಮಹಾ ಮಂಡಲ ಕೋಶಾಧಿಕಾರಿ ಬೇಬಿ ಕುಂದರ್,
ಧಾರ್ಮಿಕ ಸಂಘಟಕ ಜಗನ್ನಾಥ ಬಂಗೇರ ನಿರ್ಮಾಲ್, ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ್ ಆಚಾರ್ಯ, ಉದ್ಯಮಿ ಜನಾರ್ದನ ಅರ್ಕುಳ, ಶಾಲಾ ಸಂಚಾಲಕ ನರೇಂದ್ರ ಕುಡ್ವ, ಪ್ರಮುಖರಾದ ರತಿಕ ಶ್ರೀನಿವಾಸ್ ಮುಂಬೈ, ಯಜ್ಞೇಶ್ ಬೆಂಗಳೂರು, ವೆಂಕಟೇಶ್ ಅತ್ತಾವರ, ನಾಗೇಶ್ ಕಲ್ಲಡ್ಕ, ಉಮೇಶ್ ಬೋಳಂತೂರು, ಉಮೇಶ್ ನೆಲ್ಲಿಗುಡ್ಡೆ, ಕೃಷ್ಣಪ್ಪ ಬಂಗೇರ, ಪ್ರಕಾಶ್ ಅಡೆಪಿಲ, ವಿಕ್ರಮ್ ಬಂಗೇರ, ಪದ್ಮನಾಭ ಇಡ್ಕಿದು, ಎ .ಎಸೈ. ಪ್ರವೀಣ್ ವಿಟ್ಲ, ಎ.ಎಸೈ. ಕರುಣಾಕರ, ಧನುರಾಜ್ ಅತ್ತಾವರ, ಕೃಷ್ಣಪ್ಪ ಕೆಮನಾಜೆ, ನಿತ್ಯಾನಂದ ಸಪಲ್ಯ, ಜಯರಾಜ್ ಕರ್ಕೇರ ಮಂಟಮೆ, ನರ್ಸಪ್ಪ ಅಮೀನ್, ವೇದವ ಗಾಣಿಗ, ಯುವ ವೇದಿಕೆ ಅಧ್ಯಕ್ಷ ಭುವನೇಶ್ ಮೊಗರ್ನಾಡ್, ಮಹಿಳಾ ವೇದಿಕೆ ಅಧ್ಯಕ್ಷೆ ಆಶಾ ವೇದವ ಗಾಣಿಗ ಮತ್ತಿತರರಿದ್ದರು.
ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಭೇಟಿ ನೀಡಿದರು.
ಸಂಘದ ಕಾರ್ಯದರ್ಶಿ ಬಾಲಕೃಷ್ಣ ಸೆರ್ಕಳ ಸ್ವಾಗತಿಸಿದರು‌. ಸಚಿನ್ ಮೆಲ್ಕಾರ್ ವಂದಿಸಿದರು.ರಿಶಾಂತ್ ತೋಡಾರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು