5:31 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

19/05/2026, 17:53

-ಕಾಳಗದಲ್ಲಿ ಗಾಯಗೊಂಡು ಮೃತಪಟ್ಟ 'ಮಾರ್ತಾಂಡ' ಆನೆಯ ಸಾವಿಗೆ ಸಚಿವರ ಕಂಬನಿ

- ಸಂತ್ರಸ್ತ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ತಕ್ಷಣವೇ ₹20 ಲಕ್ಷ ಪರಿಹಾರ

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದುಬಾರೆ ಶಿಬಿರದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಎಸ್. ಬೋಸರಾಜು ಸೂಚನೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
“ಈ ಘಟನೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದೇನೆ. ಘಟನೆಗೆ ನಿಖರ ಕಾರಣಗಳೇನು ಮತ್ತು ಪ್ರವಾಸಿ ಮಾರ್ಗಸೂಚಿ ನಿರ್ವಹಣೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,” ಎಂದು ಸಚಿವರು ತಿಳಿಸಿದ್ದಾರೆ.
ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಆನೆ ಶಿಬಿರಗಳಲ್ಲಿ ಕಟ್ಟುನಿಟ್ಟಾಗಿ ಪ್ರವಾಸಿಗರ ನಿರ್ವಹಣೆಗೆ ಮಾರ್ಗಸೂಚಿ ಜಾರಿಗೆ ತರಲು ಸಚಿವರು ನಿರ್ದೇಶಿಸಿದ್ದಾರೆ. “ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸುವಂತೆ ನಿಗಾವಹಿಸಬೇಕು. ಜಿಲ್ಲಾಡಳಿತವು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾಡುಪ್ರಾಣಿಗಳ ನಡವಳಿಕೆಯನ್ನು ಹಾಗೂ ಅವುಗಳ ಪ್ರತಿಕ್ರಿಯೆಯನ್ನು ನಿಖರವಾಗಿ ಊಹಿಸಲು ಯಾರಿಗೂ ಸಾಧ್ಯವಿಲ್ಲ. ಆದ್ದರಿಂದ ಅರಣ್ಯ ಪ್ರದೇಶಗಳು ಹಾಗೂ ಆನೆ ಶಿಬಿರಗಳಿಗೆ ಭೇಟಿ ನೀಡುವ ಪ್ರವಾಸಿಗರು ಅರಣ್ಯ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರಾಣಿಗಳನ್ನು ವೀಕ್ಷಿಸುವಾಗ ಅಂತರ ಕಾಯ್ದುಕೊಳ್ಳುವ ಜೊತೆಗೆ ತಮ್ಮ ಸುರಕ್ಷತೆಯ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ಪ್ರವಾಸಿಗರಲ್ಲಿ ಕಾಳಜಿಯ ಮನವಿ ಮಾಡಿದ್ದಾರೆ.
ಇದೇ ವೇಳೆ, ಸೋಮವಾರ ದುಬಾರೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ‘ಮಾರ್ತಾಂಡ’ ಆನೆಯು ಮಂಗಳವಾರ ಬೆಳಗ್ಗೆ ಮೃತಪಟ್ಟಿರುವ ಸುದ್ದಿ ತಿಳಿದು ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾರ್ತಾಂಡನ ಅಗಲಿಕೆ ಶಿಬಿರದ ಸಿಬ್ಬಂದಿ ಹಾಗೂ ಪ್ರಾಣಿ ಪ್ರಿಯರಿಗೆ ನೋವು ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು