7:20 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಇಂಟರ್ನೆಟ್ ಪಾಸ್ವರ್ಡ್ ರಿಸೆಟ್: ಕಾರ್ಕಳದ ವ್ಯಕ್ತಿಯ ಲಕ್ಷಾಂತರ ಹಣ ದೋಚಿದ ಖದೀಮರು

18/07/2022, 21:33

ಕಾರ್ಕಳ(reporterkarnataka.com): ಇಂಟರ್ನೆಟ್ ಪಾಸ್ವರ್ಡ್ ರಿಸೆಟ್ ಮಾಡಿ ವ್ಯಕ್ತಿಯೊಬ್ಬರ ಲಕ್ಷಾಂತರ ಹಣ ದೋಚಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲಾಗುಡ್ಡೆ ಯಲ್ಲಿ ನಡೆದಿದೆ. 

ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ರುಡಾಲ್ಫ್ ಡಿ’ಸೋಜಾ(44) ಎಂಬವರು ಹಣ ಕಳೆದು ಕೊಂಡವರು.  

ಅವರು 2018-19ನೆ ಸಾಲಿನ ಟಿಬಿಓ ಟಾಕ್‌ ಕಂಪೆನಿಯ ಸ್ಕೈಲೈನ್‌ ಎಂಟರ್‌ಪ್ರೈಸಸ್‌ ಮತ್ತು ಟ್ರಾವೆಲ್ಸ್‌ನಲ್ಲಿ ವಿಮಾನ, ರೈಲು ಟಿಕೆಟ್‌ ಬುಕ್‌ ಮಾಡುವ ಫ್ರಾಂಚೈಸಿ ಪಡೆದು ಸಂಸ್ಥೆಯ ಯೂಸರ್‌ ಐಡಿ ಹೊಂದಿದ್ದರು.

2022ರ ಎಪ್ರಿಲ್ ತಿಂಗಳಿನ ಕೊನೆಯಲ್ಲಿ ಟಿಬಿಓ ಕಂಪೆನಿಯಿಂದ ರುಡಾಲ್ಫ್ ಡಿ’ಸೋಜಾ ಅವರಿಗೆ ಕರೆ ಬಂದಿದ್ದು, ನಿಮ್ಮ ಐಡಿಗೆ 14,76,284 ರೂ. ಹಣ ಪಾವತಿಸಲಾಗಿದೆ. ಅದನ್ನು ಕೂಡಲೇ ಮರುಪಾವತಿ ಮಾಡುವಂತೆ ಸೂಚಿಸಲಾಗಿತ್ತು.ಆದರೆ ರುಡಾಲ್ಫ್ ಅವರು ಕಳೆದ ಎರಡು ವರ್ಷಗಳಿಂದ ಈ ಐಡಿಯನ್ನು ಬಳಸಿರುವುದಿಲ್ಲ. ಇವರ ಸಂಸ್ಥೆಯಲ್ಲಿ ಸೇಲ್ಸ್ ಮನ್‌ ಆಗಿ ಕೆಲಸ ಮಾಡುವ ವ್ಯಕ್ತಿಯು ರುಡಾಲ್ಫ್ ಅವರ ಐಡಿಯನ್ನು ಕದ್ದು, ಇನ್ನೋರ್ವನ ಮೂಲಕ ಕಂಪೆನಿಯ ಐಡಿ ಪಾಸ್‌ವರ್ಡ್‌ ರೀಸೆಟ್‌ ಮಾಡಿಸಿದ್ದ.

ರುಡಾಲ್ಫ್ ಅವರಿಂದಲೇ ಐಡಿ ಯನ್ನು ಬಳಸುತ್ತಿರುವಂತೆ ಬಿಂಬಿಸಿ, ಕಂಪೆನಿಯಿಂದ ಬಂದಿರುವ ಹಣವನ್ನು ಟಿಕೆಟ್ ಬುಕ್ಕಿಂಗ್‌ ಖರ್ಚು ಮಾಡಿ, ಹಣ ಮರುಪಾವತಿಸದೇ ಕಂಪೆನಿಗೆ ಹಾಗೂ ರುಡಾಲ್ಫ್ ಡಿ’ಸೋಜಾ ಅವರಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಉಡುಪಿಯ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು