11:45 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನಕ್ಕೆ ಕೆಆರ್ ಎಸ್ ಪಾರ್ಟಿಯ ರವಿಕೃಷ್ಣ ರೆಡ್ಡಿಗೆ ಆಹ್ವಾನ

11/05/2026, 21:44

ಬೆಂಗಳೂರು(reporterkarnataka.com):ನೆಲಮಂಗಲದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ (KRS Party) ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಆಹ್ವಾನಿಸಿದರು.
ಆಗಸ್ಟ್ 8ರಂದು ನೆಲಮಂಗಲದ ಪುಷ್ಪ ಬೈರೇಗೌಡ ಕನ್ವೆಷನ್ ಹಾಲ್ ನಲ್ಲಿ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ಪತ್ರಕರ್ತರ 4ನೇ ರಾಜ್ಯ ಸಮ್ಮೇಳನ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ದಿಟ್ಟೆದೆಯ ಹೋರಾಟಗಾರ, ಪ್ರಾಮಾಣಿಕ ಜನಪರ ಚಿಂತಕರಾದ ರವಿಕೃಷ್ಣ ರೆಡ್ಡಿ ಅವರನ್ನು ರಾಜಾಜಿನಗರದಲ್ಲಿರುವ ಅವರ ಕೇಂದ್ರ ಕಾರ್ಯಾಲಯದಲ್ಲಿ ಬಂಗ್ಲೆ ಅವರು ಭೇಟಿಯಾಗಿ ಎರಡು ಗಂಟೆಗಳ ಕಾಲ ಅವರೊಂದಿಗೆ ಅನೇಕ ವಿಚಾರಗಳನ್ನು ಚರ್ಚಿಸಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.
ಪತ್ರಕರ್ತರ ರಾಜ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲು ರವಿಕೃಷ್ಣ ರೆಡ್ಡಿ ಅವರಿಗೆ ಆಹ್ವಾನ ನೀಡಲಾಗಿದ್ದು, ರೆಡ್ಡಿ ಅವರು ಸ್ವೀಕಾರ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಬಂಗ್ಲೆ ಅವರ ಜತೆಗೆ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು