9:03 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಇರಾ ಭಾರತ್ ಫ್ರೆಂಡ್ಸ್ ಕ್ಲಬ್ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ: ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ

11/02/2023, 22:50

ಮಂಗಳೂರು(reporterkarnataka.com): ಇರಾ ಭಾರತ್ ಫ್ರೆಂಡ್ಸ್ ಕ್ಲಬ್ ನ 25ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಇರಾ ಶಾಲಾ ಮೈದಾನದಲ್ಲಿ ಎರಡು ದಿನ ಆಯೋಜಿಸಲಾದ ಕಾರ್ಯಕ್ರಮದ ಮೊದಲ ದಿನ ಶನಿವಾರ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ಎ ಗ್ರೇಡ್ ಇರಾ ಕಬಡ್ಡಿ ಪಂದ್ಯಾಟವನ್ನು ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಎಸ್.ಗಣೇಶ್ ರಾವ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಪ್ರೀತಿ ವಿಶ್ವಾಸದ ಮೂಲಕ ಬಾಳುವ ಹಾಗೂ ಸರ್ವರನ್ನೂ ಸಮಚಿತ್ತದಿಂದ ಕಾಣುವ ಮನೋಭಾವ ಬೆಳೆಸಬೇಕು. ಕಬಡ್ಡಿ ಸಹಿತ ವಿವಿಧ ಕ್ರೀಡಾಕೂಟಗಳು ಇದಕ್ಕೆ ಪೂರಕ ಎಂದರು.

ಭಾರತ್ ಫ್ರೆಂಡ್ಸ್ ಕ್ಲಬ್ ಕಳೆದ 25 ವರ್ಷದಲ್ಲಿ ಕಬಡ್ಡಿ ಕ್ರೀಡೆಯ ಮೂಲಕವೇ ಕರಾವಳಿಯಾದ್ಯಂತ ಗುರುತಿಸಿಕೊಂಡಿರುವುದು ಶ್ಲಾಘನೀಯ. ಸಮಾಜದ ಅಭಿವೃದ್ಧಿಯಲ್ಲಿ ಸಂಸ್ಥೆಯು ತೊಡಗಿಸಿಕೊಂಡಿರುವುದು ಅಭಿನಂದನೀಯ ಎಂದು ಅವರು ನುಡಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಬಾಳಲು ಕ್ರೀಡಾಕೂಟ ಸಹಕಾರಿ. ಭಾರತ್ ಫ್ರೆಂಡ್ಸ್ ಕ್ಲಬ್ ಈ ನಿಟ್ಟಿನಲ್ಲಿ ಕಳೆದ 25 ವರ್ಷದಲ್ಲಿ ಯಶಸ್ವಿ ಕಾರ್ಯದ ಮೂಲಕ ಗುರುತಿಸಿಕೊಂಡಿದೆ ಎಂದು ಹೇಳಿದರು.


ನ್ಯಾಯವಾದಿಗಳಾದ ಜಯಪ್ರಕಾಶ್ ರೈ ಸುಳ್ಯ, ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಸೂರ್ಯಕಾಂತ್, ಇರಾ ಗ್ರಾಪಂ ಅಧ್ಯಕ್ಷೆ ಆಗ್ನೆಸ್ ಡಿಸೋಜ, ಉದ್ಯಮಿ ರಾಧಾಕೃಷ್ಣ ರೈ ಉಮಿಯ, ಬಂಟ್ವಾಳ ತಾ.ಪಂ ಮಾಜಿ ಅಧ್ಯಕ್ಷ ಚಂದ್ರಹಾಸ್ ಆರ್.ಕರ್ಕೇರ, ಇರಾ ಶಾಲೆಯ ಮುಖ್ಯ ಶಿಕ್ಷಕಿ ಶೋನಿತಾ, ಪ್ರಮುಖರಾದ ಪಿ.ಎಂ.ಕೊಡಂಗೆ, ವಾಮನ ಪೂಜಾರಿ ತಾಳಿತ್ತಬೆಟ್ಟು, ಭಾರತ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಲತೇಶ್ ಕಲ್ಲಾಡಿ, ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ರಾಜಶೇಖರ ರೈ ಇರಾಗುತ್ತು ಮುಂತಾದವರು ಉಪಸ್ಥಿತರಿದ್ದರು.
ಚಂದ್ರಹಾಸ್ ಶೆಟ್ಟಿ ಸಂಪಿಲ ಸ್ವಾಗತಿಸಿದರು. ದೇವಿಪ್ರಸಾದ್ ಶೆಟ್ಟಿ ವಂದಿಸಿದರು.
ನಾಳೆ ಸಾಂಸ್ಕೃತಿಕ ಕಲಾ ವೈಭವ: ಭಾವಾರ ಬೆಳಗ್ಗೆ 10ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. 11ರಿಂದ ಪಟ್ಲ ಸತೀಶ್ ಶೆಟ್ಟಿ ಹಾಗೂ ಜನ್ಸಾಲೆ ರಾಘವೇಂದ್ರ ಆಚಾರ್ಯ ಸಾರಥ್ಯದಲ್ಲಿ ಬಡಗು-ತೆಂಕು ಶೈಲಿಯ ಯಕ್ಷ-ಗಾನ-ನಾಟ್ಯ ವೈಭವ ನಡೆಯಲಿದೆ. ಮಧ್ಯಾಹ್ನ 2ರಿಂದ ಜಿಲ್ಲೆಯ ಪ್ರಖ್ಯಾತ 10 ತಂಡಗಳ ಸ್ಪರ್ಧಾತ್ಮಕ ನೃತ್ಯ ಪ್ರದರ್ಶನ ‘ಡ್ಯಾನ್ಸ್ ಇರಾ ಡ್ಯಾನ್ಸ್’ ನಡೆಯಲಿದೆ. ರಾತ್ರಿ 7ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಬಳಿಕ ‘ಗರುಡ ಪಂಚೆಮಿ’ ನಾಟಕ ಪ್ರದರ್ಶನವಾಗಲಿದೆ.‌

ಇತ್ತೀಚಿನ ಸುದ್ದಿ

ಜಾಹೀರಾತು