6:23 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ

24/11/2025, 18:51

ಚಿಕ್ಕಬಳ್ಳಾಪುರ(reporterkarnataka.com): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.


ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಬಿಜೆಪಿ ಅಪಪ್ರಚಾರ:*
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

*ನುಡಿದಂತೆ ನಡೆಸಿದ್ದೇವೆ:*
ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.

*ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿ.ಕೆ.ಶಿವಕುಮಾರ್ ಬದ್ಧರಾಗಬೇಕು:*
ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ. ಕೆ.ಶಿವಕುಮಾರ್ ಒಪ್ಪಬೇಕು ಎಂದರು.

*ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆಯುವೆವು:*
ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು