7:27 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಟಿ

15/08/2025, 21:09

ನವದೆಹಲಿ(reporterkarnataka.com): ಡಿಸಿಎಂ ಡಿ.ಕೆ. ಶಿವಕುಮಾರ್‌ ʼಧರ್ಮಸ್ಥಳದ ವಿರುದ್ಧ ಷಡ್ಯಂತರ ನಡೆದಿದೆʼ ಎಂದಿದ್ದಾರೆ. ಆತುರದಲ್ಲಿ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರದ್ದೇ ಷಡ್ಯಂತರವಿದೆಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ.
ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತರ ಇರುವುದು ಡಿಸಿಎಂಗೆ ಗೊತ್ತಿದೆ ಅಂದಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಾಗದೇ ಹೋಯಿತೇ? ಎಂದು ಪ್ರಶ್ನಿಸಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಅನಾಮಿಕ ಶವಗಳನ್ನು ಹೂತು ಹಾಕಿದೆ ಎಂಬ ಅನಾಮಿಕನ ಆರೋಪ ಕುರಿತಂತೆ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಸರ್ಕಾರ, ಆತುರದಲ್ಲಿ SIT ರಚಿಸುವ ಅವಶ್ಯಕತೆ ಏನಿತ್ತು? ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

*ಧರ್ಮಸ್ಥಳಕ್ಕೆ ಕಪ್ಪು ಮಸಿ-ಸರ್ಕಾರದ್ದೂ ಸಾಥ್‌ ಇದೆಯೇ?:* ತನಿಖೆಗೆ ಒತ್ತಡ, ಒತ್ತಾಯ ಹೆಚ್ಚಿದ್ದರಿಂದ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿತ್ತು. ಆದರೆ‌, ಆತುರದಲ್ಲಿ ಇಂಥ ನಿರ್ಧಾರ ತೆಗೆದುಕೊಂಡು ಧರ್ಮಸ್ಥಳಕ್ಕೆ ಕಪ್ಪು ‌ಮಸಿ ಬಳಿಯುವ ಯತ್ನಕ್ಕೆ ಸರ್ಕಾರವೂ ಸಾಥ್ ನೀಡಿದೆಯೇ? ಇದರಲ್ಲಿ ಸರ್ಕಾರದ್ದೇ ಷಡ್ಯಂತರ ಏನಾದರೂ ಇದೆಯೇ? ಎಂದು ಸಚಿವ ಜೋಶಿ ಮಾರ್ಮಿಕವಾಗಿ ಹೇಳಿದ್ದಾರೆ.

*ಡಿಸಿಎಂಗೆ ಗೊತ್ತಾದ ವಿಚಾರ ಸಿಎಂಗೆ ಗೊತ್ತಾಗಲಿಲ್ಲವೇ?:* ಡಿಸಿಎಂ ಡಿಕೆ ಶಿವಕುಮಾರ್, ʼಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಯಾರದ್ದೆಂದು ಹೇಳಲ್ಲ. ಒಳ್ಳೇ ಯೋಜನೆ, ತಂತ್ರಗಾರಿಕೆ ಹೆಣೆದು ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ. ಆದರೆ, ಯಾರು? ಏನು? ಅಂತ ಮಾತನಾಡಲು ನಾನು ಹೋಗುವುದಿಲ್ಲ. ತೇಜೋವಧೆ ಮೂಲಕ ನೂರಾರು ವರ್ಷಗಳ ಪರಂಪರೆ ಹಾಳು ಮಾಡಲು ಹೊರಟಿದ್ದಾರೆʼ ಎಂದಿದ್ದಾರೆ. ಡಿಸಿಎಂಗೆ ಗೊತ್ತಿರುವ ಈ ವಿಚಾರ ಸಿಎಂಗೆ ಗೊತ್ತಾಗಿರಲಿಲ್ಲವೇ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್​ ಹೇಳುವಂತೆ ಷಡ್ಯಂತರ ನಡೆಯುತ್ತಿದೆ ಎಂಬ ವಿಚಾರ ಗೊತ್ತಾದ ಮೇಲೂ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ SIT ರಚಿಸಿದ್ದೇಕೆ? ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಪ್ರಸಂಗವಾದರೂ ಏನಿತ್ತು? ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.

*ಗುಡ್ಡ ಅಗೆದರೂ ಇಲಿ ಹಿಡಿಯದಂತಾದ ಸರ್ಕಾರ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತ್ಯ ತಿಳಿದಿದ್ದರೂ SIT ತನಿಖೆ, ಶೋಧ ಕಾರ್ಯ, ಅಗೆತ ಕಾರ್ಯಾಚರಣೆಗೆ ಆದೇಶ ನೀಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್‌ ತನಿಖೆ ಬಳಿಕ ಕುರುಹುಗಳೇನಾದರೂ ಸಿಕ್ಕಿದ್ದೇ ಆಗಿದ್ದಲ್ಲಿ SIT ರಚಿಸಿ ಹೆಚ್ಚಿನ ತನಿಖೆ ಮುಂದುವರಿಸಬಹುದಿತ್ತು. ಆದರೆ, ʼಸರ್ಕಾರ ಗುಡ್ಡ ಅಗೆದು ಇಲಿ ಹಿಡಿಯದಂತೆʼಯೂ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು