1:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಈಶ್ವರಪ್ಪ ಅಸಮಾಧಾನ ಎರಡು ದಿನಗಳಲ್ಲಿ ಪರಿಹಾರ: ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ

16/03/2024, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆ.ಎಸ್. ಈಶ್ವರಪ್ಪ ಹಿರಿಯ ನಾಯಕರು. ಟಿಕೆಟ್ ಸಂಬಂಧಿಸಿದಂತೆ ಎದ್ದರುವ ಅಸಮಾಧಾನ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರವಾಗಿ ಅವರು ಚಿಕ್ಕಮಗಳೂರಿನಲ್ಲಿ ಮಾತನಾಡಿದರು.
ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು,ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ.
ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು ಸತ್ಯ.
ಹಾವೇರಿ ಟಿಕೆಟ್ ಕಾಂತೇಶ್ ಗೆ ನೀಡಬೇಕಿತ್ತು ಎಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ. ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರ ಬಹುದು. ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಕೋಟ ಶ್ರೀನಿವಾಸ ಪೂಜಾರಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು