2:59 PM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ; ಪುಷ್ಪಕ್ ಆರ್ ಎಲ್ ವಿ ಯಶಸ್ವಿ ಲ್ಯಾಂಡಿಂಗ್; ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಇದು!

24/06/2024, 18:01

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಚಂದ್ರಯಾನ ಯಶಸ್ವಿಯಾಗಿ ನಿರ್ವಹಿಸಿದ ಇಸ್ರೋ ಮತ್ತೊಂದು ಸಾಧನೆಯ ಮೈಲುಗಲ್ಲು ಸ್ಥಾಪಿಸಿದೆ. ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಯಶಸ್ವಿಯಾಗಿ ಮಾಡಿ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ನಾಯಕನಹಟ್ಟಿ ಹೋಬಳಿಯ ಕುದಾಪುರ ಬಳಿ ಇರುವ ಡಿಆರ್ ಡಿಒ ಆವರಣದ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.
ಇಸ್ರೋ ವಿಜ್ಞಾನಿಗಳು ಇತ್ತೀಚೆಗೆ ಚಂದ್ರಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತದ ನೌಕೆಯನ್ನು ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಲಾಗಿತ್ತು. ಇದೀಗ ಇಸ್ರೋ ಸೌರಯಾನ ನಡೆಸಿದ್ದು, ಸೂರ್ಯನ ಬಗ್ಗೆ ಅಧ್ಯಯನ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು