5:16 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ISS | ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಸ್ಪೇಸ್‌ಎಕ್ಸ್ ಕ್ಯಾಪ್ಸುಲ್: ಸುನೀತಾ ವಿಲಿಯಂ, ವಿಲ್ಮೋರ್ ಭೂಮಿಗೆ ಮರಳುವ ಹಾದಿ ಸುಗಮ

16/03/2025, 23:30

reporterkarnataka.com

ಸ್ಪೇಸ್‌ಎಕ್ಸ್ ಕ್ಯಾಪ್ಸುಲ್ ಭಾನುವಾರ ಮುಂಜಾನೆ ನಾಲ್ವರು ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಯಶಸ್ವಿಯಾಗಿ ತಲುಪಿಸಿದ್ದು, ಇದರೊಂದಿಗೆ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಮರಳಿ ಭೂಮಿಗೆ ಕರೆದು ತರುವ ಹಾದಿ ಸುಗಮವಾಗಿದೆ.
ಸುಮಾರು 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರನ್ನು ಮನೆಗೆ ಕರೆತರುವ ಗುರಿಯನ್ನು ಇದು ಹೊಂದಿದೆ.
ಶುಕ್ರವಾರ ಸಂಜೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯೊಂದಿಗೆ ಸ್ಪೇಸ್ ಎಕ್ಸ್ ನಾಸಾದ ಕ್ರ್ಯೂ -10 ನಾಲ್ವರು ಗಗನಯಾತ್ರಿಗಳನ್ನು ಹೊತ್ತು ಪ್ರಯಾಣ ಪ್ರಾರಂಭಿಸಿತ್ತು. ಸುಮಾರು 29 ಗಂಟೆಗಳ ನಂತರ ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ಭಾನುವಾರದಂದು ಬೆಳಿಗ್ಗೆ 4:04 GMT ಕ್ಕೆ ISS ನೊಂದಿಗೆ ಡಾಕ್ ಮಾಡಿತು.
ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಅಸಮರ್ಪಕ ಕಾರ್ಯದಿಂದ
ಸುನಿತಾ ಮಿಲಿಯಂ ಮತ್ತು ವಿಲ್ಮೋರ್ ಅವರು ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದರು. ಇದರಿಂದ ವಿಲ್ಮೋರ್ ಮತ್ತು ವಿಲಿಯಮ್ಸ್ ಅವರನ್ನು ಮರಳಿ ಭೂಮಿಗೆ ಕರೆದು ತರುವ ಕಾರ್ಯ ವಿಳಂಬವಾಗಿತ್ತು.
ಮೂಲತಃ, ಈ ಇಬ್ಬರು ಅನುಭವಿ ಗಗನಯಾತ್ರಿಗಳು ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು