9:20 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

17/04/2026, 21:00

ಬೆಂಗಳೂರು(reporterkarnataka.com): ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಲಿ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಬೇಕು. ನಾನು ಹಿಂದೆ ಮಂತ್ರಿ ಆಗಿದ್ದಾಗ ಪುನರ್ ರಚನೆ ಆಗಿತ್ತು. ಬೇರೆಯವರಿಗೆ ಸಚಿವ ಸ್ಥಾನ ಸಿಗಬೇಕು. ಪಕ್ಷದ ಹಂತದಲ್ಲಿ ಅದು ಆಗುತ್ತದೆ ಎಂದರು. ಈ ಸಮಯದಲ್ಲಿ ಶಾಸಕರು ಹೋಗಿದ್ದು ಸರಿಯಲ್ಲ ಡಿಸಿಎಂ ಹೇಳಿಕೆ ಬಗ್ಗೆ ನಾನು ಮಾತಾಡಲ್ಲ.ಶಾಸಕರು ಅವರು ಪ್ರಯತ್ನ ಮಾಡೋದು ತಪ್ಪಲ್ಲ. ಮಂತ್ರಿ ಆಗೋಕೆ ಎಲ್ಲರಿಗೂ ಆಸೆ ಇರುತ್ತದೆ. ಯಾರು ಮಂತ್ರಿಯಾಗಿ ಇರಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ. 33 ಜನ ಯಾರು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ಸಂಸತ್‌ನಲ್ಲಿ ಕ್ಷೇತ್ರ ಮರು ವಿಂಗಡಣೆ ವಿಧೇಯಕ ಮಂಡನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಗಳಲ್ಲಿ ಈಗ ಇರೋ ಲೋಕಸಭೆ ಕ್ಷೇತ್ರಗಳ ಪೈಕಿ 50% ಸೀಟು ಹೆಚ್ಚಳ ಮಾಡಿದ್ರೆ ಯಾವುದೇ ಅನ್ಯಾಯ ಆಗಲ್ಲ. ಮಹಿಳಾ ಮೀಸಲಾತಿ ಕೊಡಲು ಕ್ಷೇತ್ರ ಹೆಚ್ಚು ಮಾಡೋ ಅವಶ್ಯಕತೆ ಇಲ್ಲ. ಎಷ್ಟೇ ಸ್ಥಾನ ಇದ್ದರು 33% ಮೀಸಲು ಕೊಡಬೇಕು ಅಷ್ಟೇ. ಡಿಲಿಮಿಟೇಷನ್ ಬೇರೆ, ಮಹಿಳಾ ಮೀಸಲಾತಿ ಬೇರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು