12:03 AM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಇತಿಹಾಸ ಕಂಡರಿಯದ ವರ್ಷಧಾರೆ: ಬೆಚ್ಚಿಬಿದ್ದ ಮುಳ್ಳಯ್ಯನ ಗಿರಿ ಶ್ರೇಣಿ; ರಸ್ತೆಯಲ್ಲಿ 2 ಅಡಿ ಮಳೆ ನೀರು

20/10/2024, 14:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆಗೆ ಮುಳ್ಳಯ್ಯನ ಗಿರಿ ಬೆಚ್ಚಿ ಬಿದ್ದಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ 2 ಅಡಿ ಮಳೆ ನೀರು ನಿಂತಿದೆ.
ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ.
ದತ್ತಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ. ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟದಲ್ಲಿವೆ. ಎಷ್ಟೇ ಮಳೆ, ಹೇಗೆ ಸುರಿದರೂ ನೀರು ಹರಿದು ಹೋಗುತ್ತೆ. ಆದರೆ
ಹಿಂಗಾರು ಮಳೆ ಅಬ್ಬರಕ್ಕೆ ಅಂತಹಾ ಪಶ್ಚಿಮ ಘಟ್ಟವೇ ಬೆದರಿದೆ ಹೋಗಿದೆ.


ಮುಗಿಲೆತ್ತರದ ಬೆಟ್ಟಗಳ ಮೇಲೆ 2 ಅಡಿ ನೀರು ನಿಂತಿತ್ತು. ಇದರಿಂದಲೇ ಮಳೆ ಪ್ರಮಾಣ ಹೇಗಿರಬಹುದು ಎಂದು ಅಂದಾಜಿಸಬಹುದು. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಮಳೆ ಮಧ್ಯೆ ಸಿಲುಕಿ ಮುಳ್ಳಯ್ಯನಗಿರಿ ಸಹವಾಸವೇ ಬೇಡ ಎಂದ ಪ್ರವಾಸಿಗರು ಹೇಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು