4:36 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು; ಎಲ್ಲರೂ ಚಿಕ್ಕಮಗಳೂರಿನ ಕಳಸ ತಾಲೂಕಿನವರು!!

03/06/2023, 17:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿಯ ಲಿಂಕ್ ನಲ್ಲಿ ಕಾಣುವ ಗ್ರೂಪ್ ಫೋಟೋ ಹಾಗೂ ಸುದ್ದಿಯ ಒಳಗಡೆ ಇರುವ ಗ್ರೂಪ್ ಫೋಟೋಗಳಲ್ಲಿ ಇರುವವರೆಲ್ಲ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿಗೆ ಸೇರಿದವರು. ಇವರೆಲ್ಲ ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಅದೃಷ್ಟವಶಾತ್ ಇವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಂಗಸರು, ಮಕ್ಕಳು, ವೃದ್ಧರು ಸೇರಿದಂತೆ ಒಟ್ಟು 110 ಮಂದಿ ಕನ್ನಡಿಗರು ಇದ್ದರು.
ಇವರೆಲ್ಲ ಬೆಂಗಳೂರಿನಿಂದ ದುರಂತಕ್ಕೀಡಾದ ರೈಲಿನ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್ ಬದಲಾಯಿಸಿದ್ದ ಕಾರಣ ರೈಲಿನ ಮೊದಲ ಬೋಗಿಗೆ ಸ್ಥಳಾಂತರಗೊಂಡಿದ್ದರು. ಹಾಗಾಗಿ ಇವರೆಲ್ಲ ಅಪಾಯದಿಂದ ಪಾರಾಗಿದ್ದಾರೆ.


ಇಲ್ಲಿನ ಬಾಲಾಸೋರ್ ಜಿಲ್ಲೆಯ ಬಹನಗ ರೈಲ್ವೆ ನಿಲ್ದಾಣದ ಬಳಿಕ ಈ ದುರ್ಘಟನೆ ನಡೆದಿತ್ತು. ಚೆನ್ನೈ- ಕೊರೊಮಂಡೆಲ್ ಎಕ್ಸ್ ಪ್ರೆಸ್ ರೈಲು ಹಾಗೂ ಯಶವಂತಪುರ- ಹೌರಾ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದಿತ್ರು.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣ ದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ತರ ಯಶವಂತ ಪುರ ಪ್ಯಾಸೆಂಜ್ ರೈಲು ಹಾಗೂ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ತಂಡ ಬೀಡು ಬಿಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು