4:08 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಜಿ20 ಶೃಂಗಸಭೆ: ಪತ್ನಿ ಜತೆ ಭಾರತಕ್ಕೆ ಬಂದ ಅಮೆರಿಕ ಅಧ್ಯಕ್ಷ ಜೋ ಬೈಡೆನ್; ದ್ವಿಪಕ್ಷೀಯ ಮಾತುಕತೆ

09/09/2023, 11:42

ಹೊಸದಿಲ್ಲಿ(reporterkarnataka.com): ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು
ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪತ್ನಿ ಜತೆ ಭಾರತಕ್ಕೆ ಆಗಮಿಸಿದರು. ಅಧ್ಯಕ್ಷರಾದ ಬಳಿಕ ಇದು ಅವರ ಮೊದಲ ಭಾರತ ಭೇಟಿಯಾಗಿದೆ.


ಬಳಿಕ ಬೈಡನ್ ಅವರು ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಉಭಯ ಕುಶಲೋಪಾರಿ ಬಳಿಕ ಇಬ್ಬರು ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ವಿಶೇಷವಾಗಿ ರಷ್ಯಾ-ಉಕ್ರೇನ್ ಯುದ್ಧ ಸೇರಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಪ್ರಧಾನಿ ನಿವಾಸದಲ್ಲಿ ನಡೆದ ಉಭಯ ನಾಯಕರ ನಡುವಿನ ಮಾತುಕತೆ ವೇಳೆ ರಷ್ಯಾ-ಉಕ್ರೇನ್ ಸಂಘರ್ಷ, ಪರಿಹಾರ ಮಾರ್ಗೋಪಾಯ,ಪರಮಾಣ ಶಕ್ತಿ, ರಕ್ಷಣೆ ಮತ್ತು ಜೆಟ್‌ ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷರಿಗೆ ಖಾಸಗಿಯಾಗಿ ರಾತ್ರಿ ಭೋಜನದ ವ್ಯವಸ್ಥೆಯನ್ನು ಮಾಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು 3 ತಿಂಗಳ ಹಿಂದೆ ಅಮೆರಿಕಕ್ಕೆ ಭೇಟಿ ನೀಡಿದಾಗ, ಬೈಡೆನ್ ದಂಪತಿ ಮೋದಿ ಅವರಿಗೆ ಶ್ವೇತಭವನದಲ್ಲಿ ವಿಶೇಷ ಅತಿಥಿ ಸತ್ಕಾರ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು