ಇತ್ತೀಚಿನ ಸುದ್ದಿ
ಜಾನುವಾರಿಗೆ ಹುಲ್ಲು ಕೊಯ್ಯುತ್ತಿದ್ದಾಗ ಮರ ಬಿದ್ದು ವ್ಯಕ್ತಿಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು
22/07/2023, 20:14
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆಗೆ ಬೃಹತ್ ಮರವೊಂದು ಬಿದ್ದು ವ್ಯಕ್ತಿಯೊಬ್ಬರು ಶನಿವಾರ ಗಂಭೀರ ಗಾಯಗೊಂಡಿದ್ದಾರೆ.
ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಸಂಪಿಖಾನ್ ಗ್ರಾಮದಲ್ಲಿ ಜಾನುವಾರುಗಳಿಗೆ ಹುಲ್ಲು ಕೊಯ್ಯುವಾಗ ಮೈಮೇಲೆ ಬಿದ್ದ ಬೃಹತ್ ಮರ ಬಿದ್ದು ಶಂಕರಗೌಡ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಎದೆಯ ಭಾಗಕ್ಕೆ ಗಂಭೀರ ಹೊಡೆತವಾಗಿದೆ. ಒಂದು ಕಾಲು ಮುರಿತಕ್ಕೊಳಗಾಗಿದೆ. ಗಾಯಾಳುಗೆ ಕಳಸದಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನೆ ಮಾಡಲಾಗಿದೆ