3:18 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಜಾತಿ ನಿಂದನೆ ಆರೋಪ: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ

18/10/2021, 08:17

ಹೊಸದಿಲ್ಲಿ(reporterkarnataka.com) :  ಜಾತಿ ನಿಂದನೆ  ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ

ರೋಹಿತ್‌ ಶರ್ಮಾ ಜೊತೆಗೆ ಲೈವ್‌ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್‌, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದರು ಎಂದು ಆರೋಪ ಮಾಡಲಾಗಿದೆ.

ಕಳೆದ ವರ್ಷ ರೋಹಿತ್ ಶರ್ಮಾ  ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು