12:00 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ

17/03/2023, 18:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26 ನೇ ದೇರೆಬೈಲು ನೈರುತ್ಯ ವಾರ್ಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣದ ಕುರಿತು ಈ ಹಿಂದೆ ಸಮುದಾಯದ ಮುಖಂಡರಿಗೆ ನೀಡಿದ್ದ ಭರವಸೆಯಂತೆ 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ.

ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಸಹಕಾರದೊಂದಿಗೆ ಸರಕಾರದ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.
ಮುಂಬರುವ ದಿನಗಳಲ್ಲಿ ಸಮುದಾಯ ಭವನವು ಸಮಾಜದ ಬಂಧುಗಳ ಉಪಯೋಗಕ್ಕಾಗಿ ಕಾರ್ಯ ನಿರ್ವಹಿಸಲಿ ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಉಪಮೇಯರ್ ಪೂರ್ಣಿಮಾ, ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ. ಜಯಪ್ಪ, ಉಪಾಧ್ಯಕ್ಷ ಚನ್ನ ಬಸಪ್ಪ ರೊಟ್ಟಿ, ಪ್ರಧಾನ ಕಾರ್ಯದರ್ಶಿ ವಿವೇಕ್ ಶೆಟ್ಟರ್, ಜೊತೆ ಕಾರ್ಯದರ್ಶಿ ಸುನಂದಾ, ಎಚ್ ಎಸ್ ಗುರುಮೂರ್ತಿ, ಪ್ರದೀಪ್ ಜೆ.ಬಿ, ರುದ್ರಪ್ಪ, ರೂಪಾ ಮಲ್ಲಿಕಾರ್ಜುನ, ತೋಟೇ ಗೌಡ್ರು, ಮಂಗಳ, ಕವಿತಾ ಮುರುಗೇಶ್, ರಾಜೇಂದ್ರಪ್ಪ, ವೀರಣ್ಣ, ಧರ್ಮರಾಜ್, ಸುಷ್ಮಾ, ಲತಾ ಪ್ರಸನ್ನ, ಶಿವಪ್ಪ, ಶಿವಪ್ರಕಾಶ್, ಬಸವರಾಜ್, ಜೀವನ್, ಕರಿ ಬಸಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು